ಜಿಲ್ಲೆ

ಸುಂಟಿಕೊಪ್ಪದಲ್ಲಿ ವಾರ್ಡ್ ಸಭೆ

ಸುಂಟಿಕೊಪ್ಪ: 3ನೇ ವಾರ್ಡಿನ ಜನತೆಯ ಬಹುದಿನಗಳ ಬೇಡಿಯಾಗಿರುವ ಹೊಸ ಅಂಗನವಾಡಿ ಕೇಂದ್ರ, ನ್ಯಾಯಬೆಲೆ ಅಂಗಡಿ ಆರಂಭಿಸಲು ಸಂಬಂಧಿಸಿದ ಇಲಾಖೆಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ವಾರ್ಡ್ ಸದಸ್ಯ ಎ.ಶಬೀರ್ ಹೇಳಿದರು.

ಗ್ರಾಮದ ಮದರಸ ಆವರಣದಲ್ಲಿ ಶುಕ್ರವಾರ ಸಂಜೆ ಗ್ರಾಮ ಪಂಚಾಯಿತಿಯ 2025-26ನೇ ಸಾಲಿನ ಸುಂಟಿಕೊಪ್ಪ 3ನೇ ವಾರ್ಡ್‌ನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸುವ ಬಗ್ಗೆ ಕ್ರಮ ವಹಿಸಲಾಗುವುದೆಂದು ಅವರು ಭರವಸೆ ನೀಡಿದರು.

ಸಭೆಯಲ್ಲಿ ಉಪಸ್ಥಿತರಿದ್ದ 3ನೇ ವಾರ್ಡ್ ನಿವಾಸಿಗಳು ವಾರ್ಡಿನಲ್ಲಿ ಆಗಬೇಕಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ಕೆಲವೊಂದು ಗಂಭೀರ ಸಮಸ್ಯೆಗಳ ಬಗ್ಗೆ ಗಮನಸೆಳೆದರು. ಗ್ರಾಮಸ್ಥರ ಬೇಡಿಕೆಗಳನ್ನು ಆಲಿಸಿದ ಎ. ಶಬೀರ್, ಅವುಗಳನ್ನು ದಾಖಲಿಸಿಕೊಂಡರು. ಮುಂದಿನ ಸಭೆ ವೇಳೆಗೆ ಸಮಸ್ಯೆ ಪರಿಹಾರಕ್ಕೆ ಕ್ರಮ ವಹಿಸುವುದಾಗಿ ತಿಳಿಸಿದರು.

ಈ ಸಂದರ್ಭ ಪಿಡಿಒ ವಿ.ಜಿ. ಲೋಕೇಶ್, ಸಿಬ್ಬಂದಿ ಚಂದ್ರಕಲಾ, ಮಂಜುನಾಥ್, ರಂಗಸ್ವಾಮಿ ಹಾಗೂ ಇತರರು ಉಪಸ್ಥಿತರಿದ್ದರು.