ಜಿಲ್ಲೆ

ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿ

ಕೆ.ಶಿಪ್ ಯೋಜನೆಯಡಿ ಪ್ರಗತಿಯಲ್ಲಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಶಾಸಕ ಎಂ.ಆರ್ ಮಂಜುನಾಥ್ ಅಧಿಕಾರಿಗಳಿಗೆ ಸೂಚಿಸಿದರು. ರಾಜು, ಕನಕರಾಜು, ರಾಜಪ್ಪ ಇತರರು ಇದ್ದರು.

ಹನೂರು: ಕೆ-ಶಿಪ್ ಯೋಜನೆಯಡಿ ಪ್ರಗತಿಯಲ್ಲಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರು ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕೆಂದು ಶಾಸಕ ಎಂ.ಆರ್. ಮಂಜುನಾಥ್ ಸೂಚಿಸಿದರು.


ತಾಲೂಕಿನ ಮಂಗಲ ಗ್ರಾಮ ಪಂಚಾಯಿತಿಗೆ ಸೋಮವಾರ ಭೇಟಿ ನೀಡಿ ಕೆ-ಶಿಫ್ ರಸ್ತೆ ಕಾಮಗಾರಿ ಸಂಬಂಧ ನೀಲಿನಕ್ಷೆ ಪರಿಶೀಲಿಸಿದ ಬಳಿಕ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.


ಕೊಳ್ಳೇಗಾಲದಿಂದ ಹನೂರಿನವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ನಿಧಾನಗತಿಯಲ್ಲಿ ಸಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಕೆಲವು ಕಡೆ ರಸ್ತೆ ಹಾಗೂ ಸೇತುವೆ ನಿರ್ಮಾಣ ಕಾಮಗಾರಿ ಬಾಕಿ ಉಳಿದಿದೆ. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಹಾಗಾಗಿ ಈ ಬಗ್ಗೆ ಅಗತ್ಯ ಕ್ರಮಕೈಗೊಂಡು ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. ಈ ಸಂಬಂಧ ಸಮಸ್ಯೆಗಳಿದ್ದಲ್ಲಿ ನನ್ನ ಗಮನಕ್ಕೆ ತರುವಂತೆ ಸೂಚಿಸಿದರು.


ಗ್ರಾಪಂ ಅಧ್ಯಕ್ಷ ಕನಕರಾಜು, ಸದಸ್ಯ ರಾಜಪ್ಪ, ಕೆ.ಶಿಪ್ ಎಇಇ ರಾಜು ಹಾಗೂ ಇನ್ನಿತರರು ಇದ್ದರು.