ಯಾದಗಿರಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೈಕ್ರೋ ಯೋಜನೆಯಡಿ ೨೦೨೪-೨೫ನೇ ಸಾಲಿನಲ್ಲಿ ೧೦ ಕೋಟಿ ರೂ. ವೆಚ್ಚದಲ್ಲಿ ಮಂಜೂರಾದ ನಗರದ ವಿವಿಧ ಕಾಮಗಾರಿಗಳಲ್ಲಿ ಕಳಪೆ ಕಾಮಗಾರಿ ಎದ್ದು ಕಾಣುತ್ತಿದೆ ಎಂದು ಬಿಜೆಪಿ ಯುವ ಮುಖಂಡ ಮಹೇಶರಡ್ಡಿ ಮುದ್ನಾಳ್ ಆರೋಪಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಭೂಸೇನಾ ನಿಗಮದ ಅಡಿಯಲ್ಲಿ ನಡೆಯುತ್ತಿರುವ ಈ ಕಾಮಗಾರಿಗಳು ಉತ್ತಮ ಗುಣಮಟ್ಟದಿಂದ ಕೂಡಿಲ್ಲ. ಸಿಮೆಂಟ್ ಕಾಂಕ್ರಿಟ್ ಕೆಲಸವು ಕ್ಯೂರಿಂಗ್ ಇಲ್ಲದೆ ಅಲ್ಲಲ್ಲಿ ಬಿರುಕು ಬಿಡುತ್ತಿದೆ. ಕಲ್ಲಿನ ಡಿವೈಡರ್‌ಗಳಲ್ಲಿ ಕಲ್ಲುಗಳು ಅಲ್ಲಲ್ಲಿ ಉದುರಿ ಬೀಳುತ್ತಿದೆ. ರಸ್ತೆಯಲ್ಲಿ ಅಧಿಕ ಪ್ರಮಾಣದ ಕಲ್ಲುಗಳು ಅಲ್ಲಲ್ಲಿ ಹಾಕಿರುವುದರಿಂದ ವಾಹನ ಸವಾರರಿಗೆ ಮತ್ತು ಪಾದಚಾರಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಈ ವೇಳೆ ಅಪಘಾತ ಸಂಭವಿಸಿದರೆ ಇದಕ್ಕೆ ಯಾರು ಹೊಣೆ ಎಂದು ಅವರು ಪ್ರಶ್ನಿಸಿದ್ದಾರೆ.
ಅಧಿಕಾರಿಗಳ ಮತ್ತು ಗುತ್ತಿಗೆದಾರರ ಭ್ರಷ್ಟಾಚಾರ ಮತ್ತು ಕಳ್ಳಾಟದಿಂದ ಕಾಮಗಾರಿ ನಿಧಾನ ಗತಿಯಲ್ಲಿ ಸಾಗುತ್ತಿದೆ. ನಗರ ಸುಂದರೀಕರಣ ಮಾಡದೇ ಬಹುಪಾಲು ಹಣವನ್ನು ಅಧಿಕಾರಿಗಳು ಲೂಟಿ ಹೊಡೆಯುತ್ತಿz್ದÁರೆ ಎಂದು ಮುದ್ನಾಳ್ ಗಂಭೀರವಾಗಿ ಆರೋಪಿಸಿz್ದÁರೆ. ಜಿ¯್ಲÁಡಳಿತ ಇದರ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮ ಜರುಗಿಸಲು ಅವರು ಆಗ್ರಹಿಸಿz್ದÁರೆ.