ಮೈಸೂರು: ವಿಜಯದಶಮಿ ಅಂಗವಾಗಿ ಸುತ್ತೂರು ಮಠದಲ್ಲಿ ಗುರುವಾರ ವಿಶೇಷ ಪೂಜೆ ಹಾಗೂ ಬನ್ನಿಪೂಜೆ ನಡೆಯಿತು.
ಭಕ್ತಾದಿಗಳು ಹಾಗೂ ಸಾರ್ವಜನಿಕರು ಆಗಮಿಸಿ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರಿಂದ ಬನ್ನಿ ಆಶೀರ್ವಾದ ಪಡೆದುಕೊಂಡರು.
ಬೆಳಗ್ಗೆ 9ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು, ಹಿರಿಯ ಅಧಿಕಾರಿಗಳು ಮಠಕ್ಕೆ ಭೇಟಿ ನೀಡಿ ಪೂಜೆಯಲ್ಲಿ ಪಾಲ್ಗೊಂಡರು.
ಬಳಿಕ ಉಪಾಹಾರ ಸೇವನೆ ಮಾಡಿದರು. ಸಂಜೆ 5ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಭೇಟಿ ನೀಡಿದರು. ಜನಪ್ರತಿನಿಧಿಗಳು, ಸಾಹಿತಿಗಳು, ಕಲಾವಿದರು, ಅಧಿಕಾರಿಗಳು, ಗಣ್ಯರು ಸಹ ಪಾಲ್ಗೊಂಡಿದ್ದರು.