ವಿಜಯವಾಣಿ ಸುದ್ದಿಜಾಲ ಬೆಳಗಾವಿ
ನಗರದ ಕ್ಲಬ್ ರಸ್ತೆಯ ಸಿಪಿಎಡ್ ಮೈದಾನದಲ್ಲಿ ಫೆ.23ಮತ್ತು 24 ರಂದು ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕಿ ವೀರರಾಣಿ ಕಿತ್ತೂರು ಚೆನ್ನಮ್ಮ ಮೇಗಾ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ನಗರದ ವಿಜಯಾ ಆಸ್ಪತ್ರೆ ನಿರ್ದೇಶಕ ಡಾ.ರವಿ ಪಾಟೀಲ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಎರಡು ದಿನಗಳ ಕಾಲ ಸಂಜೆ5.20ರಿಂದ ರಾತ್ರಿ 8.40ಗಂಟೆಯವರೆಗೆ ಪ್ರದರ್ಶನಗೊಳ್ಳಲಿದೆ. ಮೈದಾನದಲ್ಲಿ 20ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ ಎಂದರು.
ಈ ಮೆಗಾ ನಾಟಕದಲ್ಲಿ ಆನೆ, ಕುದರೆ, ಒಂಟಿ ಸೇರಿದಂತೆ ಬೆಳಗಾವಿ,ಸವದತ್ತಿ, ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳ 300ಜನ ಕಲಾವಿದರು ಇದ್ದಾರೆ. ಈಗಾಗಲೇನಾಟಕವು ಚಿಕ್ಕೋಡಿ, ಬೈಲಹೊಂಗಲ, ಸವದತ್ತಿ, ರಾಯಬಾಗ ಇತರೆ ಭಾಗಗಳಲ್ಲಿ ಪ್ರದರ್ಶನಗೊಂಡಿದೆ. ಇದೀಗ ಬೆಳಗಾವಿನಗರದಲ್ಲಿ ಪ್ರದರ್ಶನಗೊಳ್ಳುತ್ತಿದೆ ಎಂದರು.