ಬಾಗಲಕೋಟೆ: ಮುಧೋಳ ನಗರದ ಕುಳಲಿ ರಸ್ತೆಯಲ್ಲಿರುವ ಶಾಂತಾಶ್ರಮದ ಪೀಠಾಧಿಪತಿ ಮುದ್ದೇಶ ಪ್ರಭು ಸುರೇಶ ಮಹಾರಾಜರು(೭೪) ಅನಾರೋಗ್ಯದಿಂದ ಬುಧವಾರ ನಿಧನರಾದರು.
ಸ್ವಗ್ರಾಮ ಬಾಗಲಕೋಟೆ ತಾಲೂಕಿನ ರಾಂಪೂರ ಗ್ರಾಮದಲ್ಲಿ ಬುಧವಾರ ಸಂಜೆ ಅಂತ್ಯಕ್ರಿಯೆ ನಡೆಸಲಾಯಿತು. ಅವರಿಗೆ ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ಕಳೆದ ೧೦ ವರ್ಷಗಳಿಂದ ಶ್ರೀಮಠದ ಪೀಠಾಧಿಪತಿಗಳಾಗಿ ಧರ್ಮ ಹಾಗೂ ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಶ್ರೀಗಳ ಅಗಲಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ಮಾಜಿ ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ ನಿರಾಣಿ, ಸಂಸದ ರಮೇಶ ಜಿಗಜಿಣಗಿ, ಶಾಸಕ ಎಚ್.ವೈ.ಮೇಟಿ ಹಾಗೂ ಭಕ್ತರು ಸಂತಾಪ ವ್ಯಕ್ತಪಡಿಸಿದ್ದಾರೆ.