ಜಿಲ್ಲೆ

ಸುಳ್ಳು ದಾಖಲೆ ನೀಡಿ ನೋಂದಣಿ ಮಾಡಿಸಿದ ದಸ್ತಾವೇಜು ರದ್ದತಿ ಮಸೂದೆ ರಾಷ್ಟಪತಿ ಅಂಕಿತಕ್ಕೆ ರವಾನೆ

ಕಲಬುರಗಿ :

ಸರ್ಕಾರಿ ಮತ್ತು ಖಾಸಗಿ ಆಸ್ತಿಯನ್ನು ಸುಳ್ಳು ಮಾಹಿತಿ ನೀಡಿ, ವಂಚಿಸಿ ಅಥವಾ ಕೊಟ್ಟಿ ದಾಖಲೆ‌ ಸೃಷ್ಟಿಸಿ ದುರಪಯೋಗದ ಮೂಲಕ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನೊಂದಾಯಿಸಿರುವುದು ಕಂಡುಬಂದಲ್ಲಿ ಜಿಲ್ಲಾ ನೋಂದಣಾಧಿಕಾರಿಗಳು ಅಂತಹ ಪ್ರಕರಣಗಳು ಕೈಗೆತ್ತಿಕೊಂಡು ಸದರಿ ದಸ್ತಾವೇಜನ್ನು ರದ್ದುಪಡಿಸುವ ಅಧಿಕಾರ ಒದಗಿಸುವ ಕುರಿತು ಕಳೆದ ಅಧಿವೇಶನದಲ್ಲಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು

ನಗರದ ಡಿಸಿ ಕಚೇರಿಯಲ್ಲಿ ಕಲಬುರಗಿ ವಿಭಾಗದ ಜಿಲ್ಲಾಧಿಕಾರಿಗಳ ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಮಸೂದೆಯನ್ನು

ರಾಷ್ಡ್ರಪತಿಗಳ ಅಂಕಿತಕ್ಕೆ ಕಳುಹಿಸಿದೆ. ಮುಂದಿನ 3-4 ತಿಂಗಳಲಿನಲ್ಲಿ ಗೆಜೆಟ್ ರೂಪದಲ್ಲಿ ಆದೇಶ ಹೊರಬೀಳಲಿದೆ. ಇದರಿಂದ ಕಂಡವರ ಅಸ್ತಿ ಕಬಳಿಸುವ ದಲ್ಲಾಳಿಗಳಿಗೆ ಕಡಿವಾಣ ಬೀಳಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಹಿಂದೆಲ್ಲ ಸುಳ್ಳು ದಾಖಲೆ ಸೃಷ್ಠಿಸಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೊಂದಾಯಿಸಿಕೊಂಡು ಆಸ್ತಿ ಕಬಳಿಕೆದಾರರು ಸಾರ್ವಜನಿಕರಿಗೆ ಅನಗತ್ಯ  ತೊಂದರೆ ನೀಡುತ್ತಿದ್ದರು. ವಿಜಯಪುರ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಹೆಚ್ಚಿವೆ. ಸುಳ್ಳು ದಾಖಲೆಗಳ ನೋಂದಣಿ ಗೊತ್ತಾದ ನಂತರ ಆಸ್ತಿ ಮಾಲೀಕರು ಸಿವಿಲ್‌ ನ್ಯಾಯಲಯ, ಉಚ್ಛ ನ್ಯಾಯಾಲಯ, ಸುಪ್ರೀಂ ಕೋರ್ಟ್ ಹೀಗೆ 5-6 ವರ್ಷ ನ್ಯಾಯಾಲಯಕ್ಕೆ ತಮ್ಮ ಆಸ್ತಿಗೆ ಅನಗತ್ಯ ಪರದಾಡಬೇಕಿತ್ತು. ಜಿಲ್ಲಾ ನೊಂದಣಾಧಿಕಾರಿಗಳಿಗೆ ಸುಳ್ಳು ದಸ್ತಾವೇಜು ರದ್ದುಪಡಿಸುವ ಅಧಿಕಾರ‌ ನೀಡಿದ್ದರಿಂದ ಸಾರ್ವಜನಿಕರಿಗೆ ಮುಂದಿನ ದಿನದಲ್ಲಿ ತ್ವರಿತ ನ್ಯಾಯಲಯ ಸಿಗಲು ಅನುಕೂಲವಾಗಲಿದೆ‌ ಎಂದರು.

ಸರ್ಕಾರದ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ)‌ ವಿ. ರಶ್ಮಿ‌ ಮಹೇಶ್, ಕಂದಾಯ ಇಲಾಖೆಯ ಆಯುಕ್ತ ಪಿ. ಸುನೀಲಕುಮಾರ, ಭೂಮಾಪನ‌ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಆಯುಕ್ತ ಜೆ.ಮಂಜುನಾಥ, ನೋಂದಣಿ ಮಹಾ ಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತೆ ಡಾ.ಬಿ.ಆರ್.ಮಮತಾ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಸೇರಿದಂತೆ ವಿಭಾಗದ ಜಿಲ್ಲಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು, ಸಹಾಯಕ ಆಯುಕ್ತರು, ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಜಿಲ್ಲಾ ನೋಂದಣಾಧಿಕಾರಿಗಳು, ತಹಶೀಲ್ದಾರರು, ಭೂದಾಖಲೆಗಳ ಇಲಾಖೆಯ ಉಪನಿರ್ದೇಶಕರು, ಸಹಾಯಕ ನಿರ್ದೇಶಕರು ಭಾಗವಹಿಸಿದ್ದರು.