ರಾಜ್ಯ ಸರ್ಕಾರಿ ನೌಕರರ ಸಂಘದ ಬಗ್ಗೆ ಸುಳ್ಳು ದೂರು ನೀಡಿದ ಮತ್ತು ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ, ಸಂಘದ ತಾಲೂಕು ಸಮಿತಿ ಸದಸ್ಯರು ಗಂಗಾವತಿಯಲ್ಲಿ ಶಿರಸ್ತೇದಾರ್ ರವಿಕುಮಾರ ನಾಯಕ್ವಾಡಿಗೆ ಮನವಿ ಸಲ್ಲಿಸಿದರು. ತಾಲೂಕು ಅಧ್ಯಕ್ಷ ಶರಣೇಗೌಡ ಪೊ.ಪಾಟೀಲ್, ಕಾರ್ಯದರ್ಶಿ ಹನುಮಂತಪ್ಪ ರಾಠೋಡ, ಸದಸ್ಯ ಶರಣಪ್ಪ ಹಕ್ಕಂಡಿ ಇತರರಿದ್ದರು. 
ಜಿಲ್ಲೆ

ಸುಳ್ಳು ದೂರುದಾರರ ವಿರುದ್ಧ ಕ್ರಮ ಕೈಗೊಳ್ಳಲಿ

ಗಂಗಾವತಿ: ರಾಜ್ಯ ಸರ್ಕಾರಿ ನೌಕರರ ಸಂಘ ಬಗ್ಗೆ ಸುಳ್ಳು ದೂರು ಮತ್ತು ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಂಘದ ಪದಾಧಿಕಾರಿಗಳು ಮತ್ತು ವಿವಿಧ ಇಲಾಖೆ ನೌಕರರೊಂದಿಗೆ ತಾಲೂಕು ಆಡಳಿತ ಸೌಧದ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿ ಶಿರಸ್ತೇದಾರ್ ರವಿಕುಮಾರ ನಾಯಕ್ವಾಡಿಗೆ ಮನವಿ ಸಲ್ಲಿಸಿದರು.

ಇದನ್ನೂ ಓದಿ:ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಸಂಘದ ತಾಲೂಕು ಅಧ್ಯಕ್ಷ ಶರಣೇಗೌಡ ಪೊ.ಪಾಟೀಲ್ ಮಾತನಾಡಿ, ರಾಜ್ಯ ಸಮಿತಿ ಆಡಳಿತ ಮಂಡಳಿ ನೌಕರರ ಹಿತಕಾಯುತ್ತಿದ್ದು, ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡಿದೆ. ನೌಕರರ ಸಮಸ್ಯೆಗಳಿಗೆ ಸ್ಪಂದಿಸುವುದರ ಜತೆಗೆ ಸಮಾಜಮುಖಿ ಚಟುವಟಿಕೆಗಳಿಗೂ ಆದ್ಯತೆ ನೀಡಿದೆ.

ಆಡಳಿತ ಮಂಡಳಿ ಕಾರ್ಯವೈಖರಿ ಸಹಿಸದ ಕೆಲವರು ನಕಲಿ ದಾಖಲೆ ಸೃಷ್ಟಿಸಿ ಸುಳ್ಳು ದೂರು ನೀಡುವ ಮೂಲಕ ಗೊಂದಲ ಸೃಷ್ಟಿಸುತ್ತಿದ್ದಾರೆ.
ಸಾಮೂಹಿಕ ನಾಯಕತ್ವ ಸಹಿಸದ ಕೆಲವರು ಅಪಪ್ರಚಾರಕ್ಕೆ ಮುಂದಾಗಿದ್ದು, ಸಂಘಕ್ಕೆ ಆಡಳಿತಾಧಿಕಾರಿಗಳನ್ನು ನೇಮಿಸುವಂತೆ ಒತ್ತಾಯಿಸಿರುವುದರ ಹಿಂದೆ ಒಕ್ಕೂಟ ಒಡೆಯುವ ಷಡ್ಯಂತ್ರವಿದೆ. ಸುಳ್ಳು ದೂರು ಹಾಗೂ ಅಪಪ್ರಚಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಕಾರ್ಯದರ್ಶಿ ಹನುಮಂತಪ್ಪ ರಾಠೋಡ, ಸದಸ್ಯರಾದ ಮಲ್ಲೇಶಪ್ಪ ಅಡ್ಡೇದಾರ, ಶರಣಪ್ಪ ಹಕ್ಕಂಡಿ, ಉಮೇಶ, ರಾಮಣ್ಣ, ಮಹ್ಮದ್ ರಫೀ, ಇಂದಿರಾ ಇದ್ದರು.