ಜಿಲ್ಲೆ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್‌ಐಎಗೆ ಹಸ್ತಾಂತರಿಸಲು ಕ್ಯಾ. ಚೌಟ ಮನವಿ


ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ತಕ್ಷಣ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವರ್ಗಾಯಿಸಬೇಕೆಂದು ಒತ್ತಾಯಿಸಿ ದ.ಕ.ಸಂಸದ ಕ್ಯಾ ಬ್ರಿಜೇಶ್ ಚೌಟ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.
ಸುಹಾಸ್ ಶೆಟ್ಟಿ ಭೀಕರ ಕೊಲೆ ಕೃತ್ಯದ ಕುರಿತು ತೀವ್ರ ಆತಂಕ ಮತ್ತು ನೋವಿನಿಂದ ಈ ಪತ್ರ ಬರೆಯುತ್ತಿದ್ದೇನೆ. ಈ ಘಟನೆಯು ಕರಾವಳಿ ಕರ್ನಾಟಕ ಪ್ರದೇಶದಲ್ಲಿ ಬಲಗೊಳ್ಳುತ್ತಿರುವ ಇಸ್ಲಾಮಿಕ್ ಮೂಲಭೂತವಾದ ಮತ್ತು ರಾಷ್ಟ್ರ ವಿರೋಧಿ ಶಕ್ತಿಗಳ ಅಟ್ಟಹಾಸಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಈ ಹತ್ಯೆ ಇಡೀ ರಾಜ್ಯದ ಜನರನ್ನೇ ಬೆಚ್ಚಿ ಬೀಳುವಂತೆ ಮಾಡಿದೆ ಎಂದು ಕ್ಯಾ.ಚೌಟ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯನ್ನು ನಿಷೇಧಿತ ಪಿಎಫ್‌ಐ ಸಂಘಟನೆ ಕಾರ್ಯಕರ್ತರು ನಡೆಸಿದ್ದರು. ಈ ಸಂಘಟನೆಯನ್ನು ಮೋದಿ ಸರ್ಕಾರ ನಿಷೇಧಿಸಿದೆ.ಈಗ ಅದೇ ಮಾದರಿಯಲ್ಲೇ ಮತ್ತೊಬ್ಬ ಹಿಂದೂ ಯುವಕನನ್ನು ಕಳೆದುಕೊಂಡಿರುವುಉದ ಅತ್ಯಂತ ನೋವಿನ ವಿಚಾರ. ಇದರಿಂದ ಈ ಪ್ರದೇಶದಲ್ಲಿ ಪಿಎಫ್‌ನಂತಹ ಮೂಲಭೂತವಾದಿ ಸಂಘಟನೆಗಳು ಸಕ್ರಿಯವಾಗಿರುವುದು ಸ್ಪಷ್ಟವಾಗಿದೆ. ಈ ಪ್ರಕರಣದ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ತಕ್ಷಣ ಎನ್‌ಐಎಗೆ ಹಸ್ತಾಂತರಿಸಬೇಕೆಂದು ಕ್ಯಾ. ಚೌಟ ಒತ್ತಾಯಿಸಿದ್ದಾರೆ.
ಸುಹಾಸ್ ಶೆಟ್ಟಿ ಅವರ ಹತ್ಯೆ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಧ್ಯಪ್ರವೇಶಿಸಿ, ಕೇವಲ ಅಪರಾಧಿಗಳು ಮಾತ್ರವಲ್ಲದೆ ಅವರಿಗೆ ಬೆಂಬಲ ನೀಡಿದ ಮತ್ತು ಹಣಕಾಸು ನೆರವು ನೀಡಿದ ಎಲ್ಲರನ್ನು ತ್ವರಿತವಾಗಿ ನ್ಯಾಯದ ಮುಂದೆ ತರಲು ಕ್ರಮ ಕೈಗೊಳ್ಳಬೇಕೆಂದು ಕ್ಯಾ. ಚೌಟ ವಿನಂತಿಸಿದ್ದಾರೆ.