ಜಿಲ್ಲೆ

ಸೂಕ್ತ ಕ್ರಮ ಕೈಗೊಳ್ಳಲು ಎಡಿಸಿ ಸೂಚನೆ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ವಿಮ್ಸ್ ನಲ್ಲಿ ಇತ್ತೀಚೆಗೆ ತುರ್ತುಚಿಕಿತ್ಸಾ ಘಟಕದಲ್ಲಿ ದಾಖಲಾಗಿದ್ದ ರೋಗಿ ಇತ್ತೀಚೆಗೆ ಮರಣ ಹೊಂದಿದ ಸಂಬಂಧ ರೋಗಿಯ ಸಹಾಯಕರು, ಆಸ್ಪತ್ರೆಯ ಮಹಿಳಾ ಗೃಹ ವೈದ್ಯರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಎಡಿಸಿ ಮಹಮದ್ ಝುಬೇರ್ ಪೊಲೀಸ್ ಇಲಾಖೆಗೆ ಸೂಚಿಸಿದ್ದಾರೆ.
ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಿ, ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಸೂಕ್ತ ಪೊಲೀಸ್ ರಕ್ಷಣೆ ನೀಡುವಂತೆ ವಿಮ್ಸ್ ನ ವೈದ್ಯರುಗಳ ತಂಡ ಅಪರ ಜಿಲ್ಲಾಧಿಕಾರಿಗೆ ಬುಧವಾರ ಮನವಿ ಸಲ್ಲಿಸಿತು.