ತುಮಕೂರು : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾನೂನು ಸೇವಾ ಸಮಿತಿ ಮತ್ತು ಕಾಯಂ ಜನತಾ ನ್ಯಾಯಾಲಯಗಳಲ್ಲಿ ಜಿಲ್ಲೆಯಾದ್ಯಂತ ಸೆ.11ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಕೆ.ಬಿ.ಗೀತಾ ತಿಳಿಸಿದರು.
ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈಕೋರ್ಟ್ ನ್ಯಾಯಾಧೀಶರು ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ನ್ಯಾ.ಜಿ,ನರೇಂದರ್ ನಿರ್ದೇಶನಂತೆ ಹಲವು ಕಾರ್ಯಕ್ರಮ ನಡೆಯಲಿದೆ ಎಂದರು. ಸೆ.11ರಂದು ನಡೆಯುವ ಲೋಕ ಆದಾಲತ್ ಮೂಲಕ ಕಕ್ಷಿದಾರರು ರಾಜಿ ಅಥವಾ ಸಂಧಾನದ ಮೂಲಕ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೇ ಇತ್ಯರ್ಥ ಪಡಿಸಿಕೊಳ್ಳಬಹುದು. ಇದರಿಂದ ನ್ಯಾಯಾಲಯದಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗಲಿದೆ ಎಂದರು.
ಲೋಕ್ ಅದಾಲತ್‌ನಲ್ಲಿ ರಾಜಿಯಾದ ಪ್ರಕರಣಗಳ ಆದೇಶ ಅಂತಿಮವಾಗಿರುತ್ತದೆ. ಪ್ರಕರಣವು ಇತ್ಯರ್ಥವಾದ ಬಳಿಕ ಮೇಲ್ಮನವಿಗೆ ಅವಕಾಶ ಇರುವುದಿಲ್ಲ, ಸ್ವಪ್ರೇರಣೆಯಿಂದ ಮುಂದೆ ಬಂದು ವಿವಾದಗಳನ್ನು ಬಗೆಹರಿಸಿಕೊಂಡಲ್ಲಿ ಸೌಹಾರ್ದಯುತವಾಗಿ ಜೀವನ ನಡೆಸಬಹುದು, ಸಾರ್ವಜನಿಕರು ಮುಂಚಿತವಾಗಿ ಹತ್ತಿರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವೆಗಳ ಸಮಿತಿಗೆ ಭೇಟಿ ನೀಡಿ, ತಮ್ಮ ಸಿವಿಲ್ ಪ್ರಕರಣ ಇತ್ಯರ್ಥಪಡಿಸಕೊಳ್ಳಬಹುದು ಎಂದರು.
ಪ್ರಕರಣ ಇತ್ಯರ್ಥವಾದಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣ ಮರುಪಾವತಿಸಲಾಗುವುದು ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇಂದೊಂದು ವಿಶೇಷ ಅವಕಾಶವಾಗಿದೆ ಎಂದರು. ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ನೂರುನ್ನೀಸ ಮಾತನಾಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನರಸಿಂಹಮೂರ್ತಿ, ಲತಾ ಇದ್ದರು.
ಮಾಹಿತಿಗಾಗಿ ಸಂಪರ್ಕಿಸಿ: ಪ್ರಾಧಿಕಾರಕ್ಕೆ ಮತ್ತು ಕಾನೂನು ಸೇವಾ ಸಮಿತಿಗಳಿಗೆ ಈ ಮೇಲ್ ವಿಳಾಸ:dlsatumkur1@gmail.com ಅನ್ನು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಚೇರಿ ದೂ.08162255133 ಮತ್ತು ಮೊ.9141193959 ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ, ಉಚಿತ ಸಹಾಯವಾಣಿ:1800-425-90900ಗೆ ಸಂಪರ್ಕಿಸಬಹುದು.
1,59,265 ಪ್ರಕರಣ ವಿಲೇವಾರಿ : ಜುಲ್ಯೆ 9 ರಂದು ಆಯೋಜಿಸಲಾಗಿದ್ದ ಲೋಕ ಅದಾಲತ್‌ನಲ್ಲಿ ಜೆಲ್ಲೆಯಾದ್ಯಂತ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 92,178 ಪ್ರಕರಣಗಳಲ್ಲಿ 11,790 ಪ್ರಕರಣ ಹಾಗೂ ಬಾಕಿ ಇದ್ದ 1,71,055 ಪ್ರಕರಣ ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ 1,59,265 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ.
ಮಾಹಿತಿಗಾಗಿ ಸಂಪರ್ಕಿಸಿ: ಪ್ರಾಧಿಕಾರಕ್ಕೆ ಮತ್ತು ಕಾನೂನು ಸೇವಾ ಸಮಿತಿಗಳಿಗೆ ಈ ಮೇಲ್ ವಿಳಾಸ: dlsatumkur1@gmail.com ನ್ನು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಚೇರಿ ದೂ.08162255133 ಮತ್ತು ಮೊ.9141193959 ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ, ಉಚಿತ ಸಹಾಯವಾಣಿ:1800-425-90900ಗೆ ಸಂಪರ್ಕಿಸಬಹುದು.