ಬಾಗಲಕೋಟೆ:ಜಮಖಂಡಿ ತಾಲೂಕಿನ ಖಾಜಿಬೀಳಗಿ ಗ್ರಾಮದಲ್ಲಿ ಸೆ.17 ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಗ್ರಾಮದಲ್ಲಿರುವ ಕುಂದು ಕೊರತೆಗಳನ್ನು ಬಗೆ ಹರಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸೆಪ್ಟೆಂಬರ್ ಮಾಹೆಯ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಖಾಜಿಬೀಳಗಿ ಗ್ರಾಮದ ಸಾರ್ವಜನಿಕರಿಂದ ಈಗಾಗಲೇ 287 ಅರ್ಜಿಗಳು ಸ್ವೀಕೃತವಾಗಿರುತ್ತವೆ. ಅವುಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಹಸ್ತಾಂತರಿಸುವದರಿಂದ ಶೀಘ್ರದಲ್ಲಿ ಪರಿಹಾರ ನೀಡಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಎನ್.ವೈ.ಬಸರಿಗೀಡದ, ಜಮಖಂಡಿ ಎಸಿ ಸಿದ್ದು ಹುಲ್ಲೊಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.