ಜಿಲ್ಲೆ

ಸೆ.2 ರಿಂದ ಎನಿವೇರ್ ನೋಂದಣಿ ಜಾರಿ

ಚಿತ್ರದುರ್ಗ: ರಾಜ್ಯ ಸರ್ಕಾರದ ಪ್ರಸಕ್ತ ಸಾಲಿನ ಆಯವ್ಯಯದ ಘೋಷಣೆಯಂತೆ ಜಿಲ್ಲೆಯಲ್ಲಿ ಸೆ.2 ರಿಂದ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ ಯಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ವ್ಯಾಪ್ತಿಯ ಉಪನೋಂದಣಿ ಕಚೇರಿಯಲ್ಲಿ ದಸ್ತಾವೇಜು ನೋಂದಣಿ ಮಾಡಲಾಗುತ್ತಿತ್ತು. ಎನಿವೇರ್ ನೋಂದಣಿಯಿಂದ ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪ ನೋಂದಣಿ ಕಚೇರಿಯಲ್ಲಿ ದಸ್ತಾವೇಜು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.