ಬಾಳೆಹೊನ್ನೂರು ದುರ್ಗಾದೇವಿ ನವರಾತ್ರಿ ಪೂಜಾ ಸಮಿತಿ ಸದಸ್ಯರ ಸಭೆಯಲ್ಲಿ ಕಾರ್ಯದರ್ಶಿ ಆರ್.ಡಿ.ಮಹೇಂದ್ರ ಮಾತನಾಡಿದರು. ಎಚ್.ಡಿ.ನಾಗೇಶ್ ಹೆಗ್ಡೆ, ಭಾಸ್ಕರ್ ವೆನಿಲ್ಲಾ, ಬಿ.ಚನ್ನಕೇಶವ, ಚೈತನ್ಯ ವೆಂಕಿ, ಕೆ.ಟಿ.ವೆಂಕಟೇಶ್ ಇದ್ದರು.  
ಜಿಲ್ಲೆ

ಸೆ.22ರಿಂದ ದುರ್ಗಾದೇವಿ ನವರಾತ್ರಿ ಉತ್ಸವ

ಬಾಳೆಹೊನ್ನೂರು: ಪಟ್ಟಣದ ದುರ್ಗಾದೇವಿ ನವರಾತ್ರಿ ಪೂಜಾ ಸಮಿತಿಯಿಂದ ಸೆಪ್ಟೆಂಬರ್‌ನಲ್ಲಿ 16ನೇ ವರ್ಷದ ದುರ್ಗಾದೇವಿ ನವರಾತ್ರಿ ಉತ್ಸವ ನಡೆಸಲು ಸಮಿತಿಯ ಸದಸ್ಯರ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕಾರ್ಯದರ್ಶಿ ಆರ್.ಡಿ.ಮಹೇಂದ್ರ ತಿಳಿಸಿದರು.

ನವರಾತ್ರಿ ದುರ್ಗಾದೇವಿ ಮಹೋತ್ಸವ ಪ್ರಯುಕ್ತ ಬುಧವಾರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಸೆ.22ರಿಂದ ಅ.2ರವರೆಗೆ 11 ದಿನಗಳ ಕಾಲ ನವರಾತ್ರಿ ಉತ್ಸವ ನಡೆಯಲಿದ್ದು, ಪ್ರತಿ ದಿನವೂ ಈ ಹಿಂದಿನಂತೆ ಧಾರ್ಮಿಕ ಕಾರ್ಯಗಳು ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ನಿಶ್ಚಯಿಸಲಾಗಿದೆ ಎಂದರು.

ಸಮಿತಿ ಕೋಶಾಧಿಕಾರಿ ಭಾಸ್ಕರ್ ವೆನಿಲ್ಲಾ ಮಾತನಾಡಿ, ಪಟ್ಟಣದಲ್ಲಿ ಹದಿನೈದು ವರ್ಷಗಳಿಂದ ಅಚ್ಚುಕಟ್ಟಾಗಿ ಹಾಗೂ ವಿಜೃಂಭಣೆಯಿಂದ ನಡೆಯುತ್ತಿರುವ ದುರ್ಗಾ ಉತ್ಸವ ಈ ಬಾರಿ 16ನೇ ವರ್ಷಕ್ಕೆ ಪದಾರ್ಪಣೆ ಮಾಡಿದೆ. ಪ್ರತಿ ವರ್ಷವೂ ಹತ್ತು ದಿನ ನಡೆಯುತ್ತಿದ್ದ ನವರಾತ್ರಿ ಉತ್ಸವ ಪಂಚಾಂಗದ ಪ್ರಕಾರ ಈ ಬಾರಿ 11 ದಿನ ನಡೆಯಲಿದೆ ಎಂದರು.

ಹನ್ನೊಂದು ದಿನಗಳ ಕಾಲ ತ್ರಿಕಾಲ ವೈಭವೋಪೇತ ಪೂಜಾ ಕಾರ್ಯಗಳೊಂದಿಗೆ ಭಕ್ತರಿಗೆ ಅನ್ನ ಸಂತರ್ಪಣೆ, ರಾಜ್ಯದ ವಿವಿಧ ಕಲಾತಂಡಗಳಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಿದ್ದು, ಶೀಘ್ರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿಗದಿಗೊಳಿಸಲಾಗುವುದು ಎಂದು ತಿಳಿಸಿದರು.

ಸಮಿತಿ ಅಧ್ಯಕ್ಷ ಎಚ್.ಡಿ.ನಾಗೇಶ್ ಹೆಗ್ಡೆ, ಕಾರ್ಯಾಧ್ಯಕ್ಷ ಬಿ.ಚನ್ನಕೇಶವ ಬರಗಲ್, ಉಪಾಧ್ಯಕ್ಷ ಕೆ.ಟಿ.ವೆಂಕಟೇಶ್, ಕಾನೂನು ಸಲಹೆಗಾರ ಎಚ್.ಎಚ್.ಕೃಷ್ಣಮೂರ್ತಿ, ಸಹ ಖಜಾಂಚಿ ಚೈತನ್ಯ ವೆಂಕಿ, ಸಹ ಕಾರ್ಯದರ್ಶಿ ಪ್ರಭಾಕರ್ ಪ್ರಣಸ್ವಿ, ಉಪಾಧ್ಯಕ್ಷ ಶಿವರಾಮ ಶೆಟ್ಟಿ, ಪ್ರಮುಖರಾದ ಡಿ.ಎನ್.ಸುಧಾಕರ್, ಬಿ.ನಾಗರಾಜ್, ಎಂ.ನಾರಾಯಣ, ಸುಚಿತ ಹೆಗ್ಡೆ ಇತರರಿದ್ದರು.