ಚಾಮರಾಜನಗರ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ ಚಾಮರಾಜನಗರ ಉಪವಿಭಾಗ ವ್ಯಾಪ್ತಿಯಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಸೆ.27ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಗಾಳಿಪುರ, ಮೆಡಿಕಲ್ ಕಾಲೇಜು, ಮಲ್ಲಯ್ಯನಪುರ, ಮೂಡಲಪುರ, ಮೂಡಲಪುರ ಸಣ್ಣ ಕೈಗಾರಿಕಾ ಇಲಾಖೆ, ಉತ್ತುವಳ್ಳಿ, ಯಡಪುರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ನಿಗಮದ ಜೊತೆ ಸಹಕರಿಸಬೇಕು. ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಗ್ರಾಹಕರು ಉಚಿತ ದೂ.ಸಂ 1912 ಹಾಗೂ ದೂರು ನಿರ್ವಹಣಾ ಘಟಕದ ಉಚಿತ ದೂ.ಸಂ. 1800 599 0063 ಸಂಪರ್ಕಿಸುವಂತೆ ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.