ಜಿಲ್ಲೆ

ಸೆ.28ರಂದು ಎಸ್ಸಿ/ಎಸ್ಟಿ ಕುಂದು ಕೊರತೆ ಸಭೆ

ಚಾಮರಾಜನಗರ: ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾಮಟ್ಟದ ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದ ಮುಖಂಡರ ಕುಂದು ಕೊರತೆ ಸಭೆಯನ್ನು ಸೆ.28ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಜಿಲ್ಲೆಯ ಎಲ್ಲ ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದ ಜನಾಂಗದವರು ಸಭೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಬಿ.ಟಿ. ಕವಿತಾ ಪ್ರಕಟಣೆಯಲ್ಲಿ ಕೋರಿದ್ದಾರೆ.