ಚಿತ್ರದುರ್ಗ:ನಗರದ ಬಸವೇಶ್ವರ ಪುನರ್‌ಜ್ಯೋತಿ ಐ ಬ್ಯಾಂಕ್,ರೋಟರಿ ಕ್ಲಬ್, ಬಸವೇಶ್ವರ ಮೆಡಿಕಲ್ ಕಾಲೇಜು ಸಂಯುಕ್ತಾಶ್ರಯ ದಲ್ಲಿ 39ನೇ ರಾಷ್ಟ್ರೀಯ ನೇತ್ರದಾನದ ಪಾಕ್ಷಿಕದ ಅಂಗವಾಗಿ ಸೆಪ್ಟೆಂಬರ್ 2ರಂದು ಬೆಳಗ್ಗೆ 10.30ಕ್ಕೆ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ವನ್ನು ಬಸವೇಶ್ವರ ಆಸ್ಪತ್ರೆಯಲ್ಲಿ ಏರ್ಪಡಿಸಲಾಗಿದೆ ಎಂದು ಶಿಬಿರದ ಸಂಚಾಲಕ ಎಸ್.ವೀರೇಶ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9448144871ನ್ನು ಸಂಪರ್ಕಿಸಬಹುದು.