ಜಿಲ್ಲೆ

ಸೆಂಟರ್ ಆಫ್ ಎಕ್ಸ್ಲೆನ್ಸ್ ಶೀಘ್ರ ಸ್ಥಾಪನೆ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೌಶಲದ ಜತೆಗೆ ಉದ್ಯೋಗಕ್ಕೆ ಬೇಕಾದ ಅಗತ್ಯ ತರಬೇತಿ ನೀಡುವುದಕ್ಕೆ ಸೆಂಟರ್ ಆಫ್ ಎಕ್ಸ್ಲೆನ್ಸ್ ಸ್ಥಾಪನೆ ಮಾಡಲಾಗುವುದು ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಡಾ.ಬಸವರಾಜ ಗಾದಗೆ ಹೇಳಿದರು.

ಪ್ರಾದೇಶಿಕ ಕೇಂದ್ರದ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಹಾಗೂ ವಿಶ್ವವಿದ್ಯಾಲಯದ ರ‍್ಯಾಂಕ್ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸೆಂಟರ್ ಆಫ್ ಎಕ್ಸ್ಲೆನ್ಸ್ನಿಂದ ಸ್ಥಳದ¯್ಲÉÃ ಈ ಭಾಗದ ವಿದ್ಯಾರ್ಥಿಗಳಿಗೆ ದೊಡ್ಡ- ದೊಡ್ಡ ಕಂಪನಿಗಳಲ್ಲಿ ನೌಕರಿ ದೊರಕಲು ಅನುಕೂಲವಾಗುತ್ತದೆ. ಮುಂದಿನ ದಿನಗಳಲ್ಲಿ ವಿಟಿಯು ಕುಲಪತಿ ಪ್ರೊ.ವಿದ್ಯಾಶಂಕರ ಅವರು ಇಲ್ಲಿಗೆ ಭೇಟಿ ನೀಡಿ ಪರಿಶೀಲಿಸಿ, ಚಾಲನೆ ನೀಡುವರು ತಿಳಿಸಿದರು.

ವಿಟಿಯು ಮಹಿಳಾ ಶಿP್ಷÀಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಶೇ.೬೫ ವಿದ್ಯಾರ್ಥಿನಿಯರೇ ವಿದ್ಯಾಭ್ಯಾಸ ಮಾಡುತ್ತಿz್ದÁರೆ. ವಿದ್ಯಾರ್ಥಿಗಳಿಗೆ ಉಚಿತ ವಸತಿ ಜತೆಗೆ ಲ್ಯಾಪ್‌ಟಾಪ್, ಪ್ರಾಜೆಕ್ಟ್ಗೆ ಐದು ಸಾವಿರ ರೂ.ಪ್ರೋತ್ಸಾಹ ಧನ ಸೇರಿ ಇತರ ಸೌಲಭ್ಯಗಳು ಕಲ್ಪಿಸಲಾಗುತ್ತಿದೆ ಎಂದು ವಿವರಿಸಿದರು.
ಹೈದರಾಬಾದ್ ಕರ್ನಾಟಕ ಶಿP್ಷÀಣ ಸಂಸ್ಥೆ ಕಾರ್ಯದರ್ಶಿ ಡಾ.ಜಗನ್ನಾಥ ಬಿಜಾಪುರೆ ಲ್ಯಾಪ್‌ಟಾಪ್ ವಿತರಿಸುವ ಜತೆಗೆ ರ‍್ಯಾಂಕ್, ಪಿಎಚ್‌ಡಿ ವಿದ್ಯಾರ್ಥಿಗಳನ್ನು ಸತ್ಕರಿಸಿದರು. ಹೈಕ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಸದಸ್ಯ ಅನೀಲಕುಮಾರ ಪಟ್ಟಣ, ಡಾ.ರಾಜಶೇಖರ ಪಾಟೀಲ್, ಡಾ.ಶುಭಾಂಗಿ ಇತರರಿದ್ದರು. ಡಾ.ಶಿವರಾಮೇಗೌಡ ನಿರೂಪಣೆ ಮಾಡಿದರು.