ಹಾಸನ: ನಗರದ ಡೈರಿ ಸರ್ಕಲ್ ಬಳಿಯ ಬಿ. ಕಾಟಿಹಳ್ಳಿಯಲ್ಲಿ ನಿರ್ಮಿಸಲಾಗಿರುವ ಸೇಂಟ್ ಜೋಸೆಫ್ ಕಾಲೇಜಿನ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮವು ಇದೇ ಜೂ.3ರಂದು ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಡೇನಿಯಲ್ ಫನಾರ್ಂಡಿಸ್ ತಿಳಿಸಿದರು.
ಕಳೆದ ಅನೇಕ ವರ್ಷಗಳಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸೇಂಟ್ ಜೋಸೆಫ್ ಕಾಲೇಜು ಕೆಲಸ ಮಾಡುತ್ತಿದೆ. ಹಾಸನದಲ್ಲಿ ಮತ್ತಷ್ಟು ಜನರಿಗೆ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನೂತನ ಕಟ್ಟಡ ಉದ್ಘಾಟನೆಗೆ ಸಜ್ಜಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಜನರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಅವರು ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಎಸ್ಪಿ ಹರಿರಾಂ ಶಂಕರ್, ಅಧ್ಯಕ್ಷರಾದ ದೈನಿಷಿಯಸ್ ವಾಜ್, ಸೇಂಟ್ ಜೋಸೆಫ್ ಕಾಲೇಜಿನ ಪ್ರಾಂಶುಪಾಲರಾದ ಡೇನಿಯಲ್ ಫನಾರ್ಂಡಿಸ್ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾಸನ ವಿಶ್ವ ವಿದ್ಯಾನಿಲಯದ ಉಪ ಕುಲಪತಿಗಳಾದ ಪ್ರೊ. ತಾರಾನಾಥ್ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರದೀಪ್ ಕುಮಾರ್, ಪ್ರೊಫೆಸರ್ ರಂಗೇಗೌಡ ಇತರರು ಇದ್ದರು.