ಸೇಡಂ: ತೋಟಗಾರಿಕೆ ಇಲಾಖೆಯಿಂದ 2023-24ನೇ ಸಾಲಿನ ರಾಷ್ಟಿçÃಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸ ಪ್ರದೇಶ ವಿಸ್ತರಣೆ, ಡ್ರಾö್ಯಗನ್ ಫ್ರೂಟ್, ಹೈಬ್ರಿಡ್ ತರಕಾರಿ ಮತ್ತು ಹೂವಿನ ಬೆಳೆಗಳು, ಸಣ್ಣ ಟ್ರಾö್ಯಕ್ಟರ್, ಪ್ಲಾಸ್ಟಿಕ್ ಮಲ್ಚಿಂಗ್ ಮತ್ತು ಪ್ಯಾಕ್ ಹೌಸ್, ಈರುಳ್ಳಿ ಶೇಖರಣಾ ಘಟಕಗಳಿಗೆ ಸಹಾಯಧನ ಪಡೆಯುವುದಕ್ಕೆ ಆಸಕ್ತ ರೈತರು ಅರ್ಜಿ ಸಲ್ಲಿಸಬಹುದು. ಸೆ.22 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.8250939263, 7619319331, 7899994358 ಸಂಪರ್ಕಿಸಬಹುದು.