ಜಿಲ್ಲೆ

ಸೇವಾಲಾಲ್‌ರ ಭಾವಚಿತ್ರದ ಅದ್ದೂರಿ ಮೆರವಣಿಗೆ

ಬಾಗಲಕೋಟೆ: ಕಾರ್ಯಕ್ರಮ ಪೂರ್ವದಲ್ಲಿ ಜಿಲ್ಲಾಡಳಿತ ಭವನದ ಆವರಣದಲ್ಲಿ ಸಂತ ಸೇವಾಲಾಲರ ಭಾವಚಿತ್ರಕ್ಕೆ ಬಿಟಿಡಿಎ, ಶಾಸಕ ಎಚ್.ವೈ.ಮೇಟಿ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

ವಿ.ಪ ಸದಸ್ಯ ಶಾಸಕ ಪಿ.ಎಚ್.ಪೂಜಾರ, ಅಪರ ಜಿಲ್ಲಾಽಕಾರಿ ಪರಶುರಾಮ ಶಿನ್ನಾಳಕರ ಸೇರಿದಂತೆ ಸಮುದಾಯ ಮುಖಂಡರು ಪಾಲ್ಗೊಂಡಿದ್ದರು. ಮೆರವಣಿಗೆ ಜಿಲ್ಲಾಡಳಿತ ಭವನದಿಂದ ಪ್ರಾರಂಭವಾಗಿ ನಗರದ ನಾನಾ ಕಡೆ ಸಂಚರಿಸಿ ನವನಗರ ಕಲಾಭವನಕ್ಕೆ ಮುಕ್ತಾಯಗೊಂಡಿತು. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾ ತಂಡಗಳ ಲಂಬಾಣಿ ಕುಣಿತ ತಂಡಗಳು ಭಾಗವಹಿಸಿದ್ದವು.