ಚಿತ್ರದುರ್ಗ: ಜಿಲ್ಲಾ ಕ್ವಾರಿ ಮತ್ತು ಕ್ರಷರ್ ಮಾಲೀಕರ ಸಂಘದ ಅಧ್ಯಕ್ಷರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭೂವಿಜ್ಞಾನಿ ಎಸ್.ಬಿ.ಮಧುಸೂದನ್ ಅವರನ್ನು ಸರ್ಕಾರ ಸೇವೆಯಿಂದ ಅಮಾನತು ಮಾಡಿದೆ.
ಪ್ರತಿ ತಿಂಗಳು ಮಾಮೂಲಿ ಕೊಡಬೇಕೆಂದು ಒತ್ತಾಯಿಸಿ ನಗರದ ಖಾಸಗಿ ಹೋಟೆಲ್‌ವೊಂದರಲ್ಲಿ ತಮ್ಮ ಮೇಲೆ ಹಲ್ಲೆ ನಡೆಸಿದ್ದರೆಂದು ಮಧುಸೂದನ್ ವಿರುದ್ಧ ಸಂಘದ ಅಧ್ಯಕ್ಷ ಅಬ್ದುಲ್ ಮಜೀದ್ ಆರೋಪಿಸಿ ನಗರ ಠಾಣೆಗೆ ಈಚೆಗೆ ದೂರು ನೀಡಿದ್ದರು.
ದುರ್ನಡತೆ, ಕರ್ತವ್ಯ ಲೋಪ, ಅಶಿಸ್ತು ಹಾಗೂ ಸರ್ಕಾರಿ ನೌಕರನಿಗೆ ತಕ್ಕದ್ದಲ್ಲದ ನಡವಳಿಕೆ ತೋರಿದ ಹಿನ್ನೆಲೆಯಲ್ಲಿ ಮಧುಸೂದನ್‌ರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿರ್ದೇಶಕ ಆರ್.ಗಿರೀಶ್ ಬುಧವಾರ ಆದೇಶದಲ್ಲಿ ತಿಳಿಸಿದ್ದಾರೆ.