ತೋರಣಗಲ್ ಗ್ರಾಮದ ಮನೆಯೊಂದರಲ್ಲಿ ಆರೋಗ್ಯ ಇಲಾಖೆಯಿಂದ ಕೀಟನಾಶಕ ಸಿಂಪಡಣೆ ಮಾಡಲಾಯಿತು. 
ಜಿಲ್ಲೆ

ಸೊಳ್ಳೆ ನಿಯಂತ್ರಣಕ್ಕೆ ಕೀಟನಾಶಕ ಸಿಂಪಡಣೆ

ರುದ್ರಪ್ಪ ವಾಲಿ

ಸಂಡೂರು: ಸೊಳ್ಳೆಗಳ ನಿಯಂತ್ರಣಕ್ಕೆ ಪ್ರತಿ ಮನೆಗೂ ಕೀಟನಾಶಕ ಸಿಂಪಡಣೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ.ಅಬ್ದುಲ್ಲಾ ಹೇಳಿದರು.

ತೋರಣಗಲ್ ಗ್ರಾಮದಲ್ಲಿ ಸೊಳ್ಳೆ ನಿಯಂತ್ರಣಕ್ಕಾಗಿ ಒಳಾಂಗಣ ಕೀಟನಾಶಕ ಸಿಂಪಡಣೆ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಗುಣಮಟ್ಟದ ಕೀಟನಾಶಕ ಸಿಂಪಡಣೆ ಮಾಡಲಾಗುತ್ತಿದೆ. ಪ್ರತಿಯೊಬ್ಬರೂ ಇದರ ಪ್ರಯೋಜನ ಪಡೆಯಬೇಕು. ಸೊಳ್ಳೆಗಳ ನಿಯಂತ್ರಣಕ್ಕೆ ಪ್ರತಿ ಮನೆಯ ಎಲ್ಲ ಕೋಣೆಗಳಲ್ಲಿ ಕೀಟನಾಶಕ ಸಿಂಪಡಣೆ ಮಾಡಿಸಲಾಗುವುದು.

ಸೊಳ್ಳೆಗಳ ನಿಯಂತ್ರಣದಿಂದ ಮಲೇರಿಯಾ, ಡೆಂಘೆ, ಚಿಕೂನ್ ಗುನ್ಯಾ, ಮಿದುಳು ಜ್ವರ, ಆನೆಕಾಲು ರೋಗ ಹಾಗೂ ಝೀಕಾ ವೈರಸ್ ಕಾಯಿಲೆಗಳನ್ನು ತಡೆಗಟ್ಟಬಹುದು ಎಂದರು.

ಆರೋಗ್ಯ ಇಲಾಖೆ ಕೀಟ ಜನ್ಯ ಶಾಸ್ತ್ರ ತಜ್ಞೆ ನಂದಾಕಡಿ, ನಿರೀಕ್ಷಣಾಧಿಕಾರಿ ಶಕೀಲ್ ಅಹಮದ್, ನಿಜಾಮುದ್ದೀನ್, ಮರಿಬಸವನಗೌಡ, ಆಶಾ ಕಾರ್ಯಕರ್ತೆ ನೀಲಮ್ಮ ಇತರರಿದ್ದರು.