ಚಿತ್ರದುರ್ಗ: ಸೊಳ್ಳೆಗಳನ್ನು ನಿಯಂತ್ರಿಸದೆ ಡೆಂೆ ಜ್ವರ ಹತೋಟಿ ಕಷ್ಟ ಎಂದು ಜಿಲ್ಲಾ ಕೀಟಶಾಸ್ತ್ರಜ್ಞೆ ನಂದಿನಿ ಕಡಿ ಹೇಳಿದರು.
ನಗರದ ಚೇಳುಗುಡ್ಡದಲ್ಲಿ ಮಂಗಳವಾರ ಡೆಂೆ ಜ್ವರ ತಡೆಗಟ್ಟುವಿಕೆ ಮತ್ತು ನಿರ್ವಹಣೆ ಕುರಿತ ಜಾಗೃತಿ ಕಾರ‌್ಯಕ್ರಮದಲ್ಲಿ ಮಾತನಾಡಿ, ಸಾಂಕ್ರಾಮಿಕ ರೋಗ ಡೆಂೆ ಜ್ವರವನ್ನು ಮುರಿದ-ಮೂಳೆ ಜ್ವರವೆಂದು ಕರೆಯಲಾಗುತ್ತಿತ್ತು. ಏಕೆಂದರೆ ರೋಗಿಯಲ್ಲಿ ತೀವ್ರ ಕೀಲು ಮತ್ತು ಸ್ನಾಯು ನೋವು ಮತ್ತು ಮೂಳೆಗಳು ಮುರಿಯುತ್ತಿರುವಂತೆ ಭಾಸವಾಗುತ್ತದೆ ಎಂದರು.
ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್ ಮಾತನಾಡಿ, ವಾರಕ್ಕೊಮ್ಮೆಯಾದರೂ ಮನೆ ನೀರು ಸಂಗ್ರಹ ಪರಿಕರಗಳನ್ನು ಸ್ವಚ್ಛಗೊಳಿಸಬೇಕು. ಮನೆ ನೀರಿನ ತೊಟ್ಟಿಗಳಿಗೆ ಲಾರ್ವಾಹಾರಿ ಮೀನುಗಳನ್ನು ವಿತರಿಸುತ್ತಿದ್ದು, ಇವು ಸೊಳ್ಳೆಗಳು ಉತ್ಪತ್ತಿಯಾಗದಂತೆ ನೋಡಿಕೊಳ್ಳುತ್ತವೆ. ಸೊಳ್ಳೆಗಳ ಸ್ವಯಂ ರಕ್ಷಣೆ ಪಡೆಯಬೇಕೆಂದು ಸಲಹೆ ನೀಡಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯಕ್ ಮಾತನಾಡಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ, ಜಿಲ್ಲಾ ಮಲೇರಿಯಾ ವಿಭಾಗದ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶ್ರೀನಿವಾಸ್ ಮಳಲಿ, ನಾಗರಾಜ್, ನೆಹರು ನಗರ ಆರೋಗ್ಯ ಕೇಂದ್ರದ ಆರೋಗ್ಯ ನಿ ರೀಕ್ಷಣಾಧಿಕಾರಿಗಳಾದ ಗುರುಮೂರ್ತಿ, ಗೋಪಾಲಕೃಷ್ಣ, ಕೀಟ ಸಂಗ್ರಹಕಾರರಾದ ಶ್ರೀಕಾಂತ್, ಕಾವ್ಯಾ, ಆಶಾ ಕಾರ್ಯಕರ್ತೆಯರಾದ ಅಭಿನಯ, ರೇಷ್ಮಾ, ಗೀತಾ ಮತ್ತಿತರರು ಇದ್ದರು.