ಸಾಂದರ್ಭಿಕ ಚಿತ್ರ 
ಜಿಲ್ಲೆ

ಸೋಗಿನ ಬಾಗಿನದ ಅವಶ್ಯಕತೆಯಿಲ್ಲ

ಚಿಕ್ಕಮಗಳೂರು: ಪಾಪ ಅವರು ಸದನದಲ್ಲಿ ಮಾಡಬಾರದ ಅವಮಾನ ಮಾಡಿದ್ದಾರೆ. ಈಗ ಬಾಗಿನ ನೀಡಲು ಬಂದಿದ್ದಾರೆ. ಬಿಜೆಪಿಯವರ ಸೋಗಿನ ಬಾಗಿನದ ಅವಶ್ಯಕತೆ ನನಗಿಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಕ್ಕಮಗಳೂರಿನ ಜನತೆ ನನಗೆ ಮನೆ ಮಗಳಂತೆ ಸ್ವಾಗತ ಕೋರಿದ್ದಾರೆ. ಅದು ನನಗೆ ಸಾಕು ಎಂದರು.

ಬೆಳಗಾವಿಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಕಠಿಣ ಶಬ್ದದಿಂದ ಖಂಡಿಸುತ್ತೇನೆ. ಆರೋಪಿಗಳು ಯಾರೇ ಆಗಿದ್ದರೂ ಅತ್ಯಂತ ಕಠಿಣವಾದ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸುತ್ತೇನೆ ಎಂದರು.

ಪ್ರಕರಣವನ್ನು ಕಂಪ್ಲೀಟ್ ಆಗಿ ಟ್ರ್ಯಾಕ್ ಮಾಡುತ್ತಿದ್ದೇನೆ. ಸಂತ್ರಸ್ತೆಯ ಮನೆಯವರು ಹಾಗೂ ಪೊಲೀಸರ ಜೊತೆ ನಿರಂತರ ಸಂಪರ್ಕದಲ್ಲಿ ಇದ್ದೇನೆ. ಜೊತೆಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಿನ್ ಟು ಪಿನ್ ಮಾಹಿತಿಯನ್ನು  ಪಡೆದುಕೊಳ್ಳುತ್ತಿದ್ದೇನೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಲೇಬೇಕು. ಅವರಿಗೆ ಕ್ಷಮೆ ಎನ್ನುವುದೇ ಇಲ್ಲ ಎಂದು ಹೇಳಿದರು.

ಬಿಜೆಪಿ ನಡೆಸುತ್ತಿರುವ ಕಲಬುರ್ಗಿ ಚಲೋ ಹೋರಾಟಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವವಿದೆ. ಅವರು ಎಲ್ಲಿಗೆ ಬೇಕಾದರೂ ಚಲೋ ಕೊಡಬಹುದು ಎಂದು ವ್ಯಂಗ್ಯವಾಡಿದರು.