ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘವು ಕಲಾವಿದ ಬಿ. ಮಾರುತಿ ದತ್ತಿ ನಿಮಿತ್ತ ಸೆ. 13ರಂದು ಸಂಜೆ 6 ಗಂಟೆಗೆ ಸಂಘದ ರಾ. ಹ. ದೇಶಪಾಂಡೆ ಭವನದಲ್ಲಿ ಚಿತ್ತಾರ ಚೇತನ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಿದೆ.
ಮೈಸೂರಿನ ಹಿರಿಯ ಸಾಹಿತಿ ಡಾ. ಎನ್. ಜಗದೀಶ ಕೊಪ್ಪ ಪ್ರಶಸ್ತಿ ಪ್ರದಾನ ಮಾಡುವರು. ಅತಿಥಿಗಳಾಗಿ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಮುಖ್ಯಸ್ಥ ಡಾ. ಬಸವರಾಜ ಕುರಿಯವರ, ಹುಬ್ಬಳ್ಳಿಯ ವಿಜಯ ಮಹಾಂತೇಶ ಲಲಿತಕಲಾ ಕಾಲೇಜಿನ ಉಪನ್ಯಾಸಕ ಡಾ. ಪ್ರತಾಪ ಬಹುರೂಪಿ ಆಗಮಿಸುವರು. ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸುವರು.
ಧಾರವಾಡದ ಯುವ ಕಲಾವಿದೆ ಸೌಜನ್ಯ ಕರಡೋಣಿ ಅವರಿಗೆ ಚಿತ್ತಾರ ಚೇತನ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಹಿರಿಯ ಕಲಾವಿದ ಬಿ. ಮಾರುತಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.