ಜಿಲ್ಲೆಯ ವಿವಿಧ ತಾಲೂಕಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಗಳಲ್ಲಿ ಸೇವೆ ಸಲ್ಲಿಸಿದ ಸಿಬ್ಬಂದಿಗಳಿಗೆ ಜಿ.ಪಂ ಸಿಇಒ ಶಶಿಧರ ಕುರೇರ ಆದೇಶ ಪ್ರತಿ ನೀಡಿದರು 
ಜಿಲ್ಲೆ

ಸೌಲಭ್ಯ ಒದಗಿಸಲು ಆದ್ಯತೆ ನೀಡಿ

ಸಂತೋಷ ದೇಶಪಾಂಡೆ

ಬಾಗಲಕೋಟೆ: ಸರ್ಕಾರದ ಸೇವೆ ಎನ್ನುವುದು ದೇವರ ಕೆಲಸ. ಸಾರ್ವಜನಿಕರಿಗೆ ಸೌಲಭ್ಯ ಒದಗಿಸಲು ಪ್ರಮಾಣಿಕ ಸೇವೆ ನೀಡಬೇಕು ಎಂದು ಜಿ.ಪಂ ಸಿಇಒ ಶಶಿಧರ ಕುರೇರ ಹೇಳಿದರು.

ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಗುರುವಾರ ಜಿಲ್ಲೆಯ ವಿವಿಧ ತಾಲೂಕಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಗಳಲ್ಲಿ ೨೦೧೭ರ ಪೂರ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ೭೨ ವಿವಿಧ ಹುದ್ದೆಯ ಸಿಬ್ಬಂದಿಗಳ ನೇಮಕಾತಿ ಪ್ರಸ್ತಾವನೆಗೆ ಅನುಮೋದನೆ ನೀಡಿದ ಆದೇಶ ಪತ್ರ ವಿತರಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯಿತಿ ಅಭಿವೃದ್ಧಿ ಅಽಕಾರಿ ಹಾಗೂ ತಾಲೂಕಾ ಪಂಚಾಯಿತಿ ಕಾರ್ಯನಿರ್ವಾಹಕ ಅಽಕಾರಿಗಳು ಇಲ್ಲಿಯವರೆಗೆ ಕಾರ್ಯನಿರ್ವಹಿಸಿದ ನಿಮ್ಮ ಕಾರ್ಯ ವೈಖರಿ ಬಗ್ಗೆ ಸಲ್ಲಿಸಿದ ಪ್ರಸ್ತಾವನೆ ಪರಿಗಣಿಸಿ ೭೨ ಸಿಬ್ಬಂದಿಗಳಿಗೆ ಅನುಮೋನೆ ನೀಡಲಾಗಿದೆ ಎಂದರು.

ನಿಯೋಜನೆಗೊಂಡ ಸಿಬ್ಬಂದಿಗಳೆಲ್ಲ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಿರಿ, ಮುಂದೆಯು ಕೂಡಾ ಉತ್ತಮವಾಗಿ ಕಾರ್ಯನಿರ್ವಹಿಸಿ ಪಂಚಾಯಿತಿ ಹೆಸರು ತರುವ ಕೆಲಸವಾಗಬೇಕು. ಗ್ರಾಮ ಪಂಚಾಯಿತಿ ವ್ಯವಸ್ಥೆಯಲ್ಲಿ ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯ ಸಿಗಬೇಕಾದರೆ, ಮುಖ್ಯವಾಗಿ ಜನರ ಹತ್ತಿರದಿಂದ ಕೆಲಸ ಮಾಡುವÀ ಪಾತ್ರ ಬಹಳ ಮುಖ್ಯವಾಗಿದೆ. ಸರ್ಕಾರದ ಆದೇಶದನ್ವಯ ಹೆಚ್ಚಿನ ಮುತುವರ್ಜಿ ವಹಿಸಿ ಅನುಮೋದನೆ ಪತ್ರ ನೀಡಲಾಗಿದೆ. ಮುಖ್ಯವಾಗಿ ಗ್ರಾಮಗಳಲ್ಲಿ ಕುಡಿಯುವ ನೀರು ಹಾಗೂ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ಸಮರ್ಪಕ ನಿರ್ವಹಣೆ ಕೆಲಸ ಆಗಬೇಕು ಎಂದರು.

ಮೇಲಾಽಕಾರಿಗಳಾದ ನಾವುಗಳು ಕೇವಲ ಆದೇಶ ಮಾಡಿ ನಿರ್ದೇಶನ ನೀಡುವ ಕೆಲಸ ಮಾಡುತ್ತೇವೆ. ಆದರೆ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಪಂಚಾಯಿತಿ ಅಭಿವೃದ್ಧಿ ಅಽಕಾರಿಗಳು ಮಾಡುವ ಕೆಲಸದಲ್ಲಿ ಡಿ ಗ್ರೂಪ್‌ನವರು ಸಹಾಯಕರಾಗಿ ಕೆಲಸ ಮಾಡುತ್ತಿದ್ದೀರಿ. ಡಿ ಗ್ರೂಫ್ ಸಿಬ್ಬಂದಿಗಳಿಗೂ ಕರ್ತವ್ಯ ಮತ್ತು ಜವಾಬ್ದಾರಿ ಇದ್ದು, ಸಾರ್ವಜನಿರಿಗೆ ಹತ್ತಿರವಿರುವ ನಿಮ್ಮ ಪಾತ್ರ ಬಹಳ ಮುಖ್ಯವಾಗಿದೆ. ಕಾಲ ಕಾಲಕ್ಕೆ ಸರ್ಕಾರದಿಂದ ಹೊಸ ಹೊಸ ಯೋಜನೆಗಳ ಅನುಷ್ಠಾನಕ್ಕೆ ಪ್ರಾಮಾಣಿಕವಾಗಿ ಕೆಲಸ ಮಾಡಲು ತಿಳಿಸಿದರು.

ಪಂಚಾಯಿತಿ ಅಭಿವೃದ್ಧಿ ಅಽಕಾರಿಗಳ ಸಂಘದ ರಾಜ್ಯಾಧ್ಯಕ್ಷ ರಾಜು ವಾರದ ಮಾತನಾಡಿ, ಹಲವಾರು ವರ್ಷಗಳಿಂದ ಗ್ರಾ.ಪಂ ಸಿಬ್ಬಂದಿಗಳ ಕೋರಿಕೆ ಈಡೇರಿದ್ದು, ಜಿಲ್ಲೆಯಲ್ಲಿ ೧೫೦ಕ್ಕೂ ಹೆಚ್ಚು ಸಿಬ್ಬಂದಿಗಳ ಪ್ರಸ್ತಾವನೆಗೆ ಅನುಮೋದನೆ ನೀಡಿರಿರುವುದು ರಾಜ್ಯದಲ್ಲಿ ಮೊದಲು ಎಂದರು.

ಜಿ.ಪಂ ಉಪ ಕಾರ್ಯದರ್ಶಿ ಎನ್.ವೈ.ಬಸರಿಗಿಡದ ಮಾತನಾಡಿ, ೨೦೧೭ರ ಪೂರ್ವದಲ್ಲಿ ವಿದ್ಯಾರ್ಹತೆ ಹೊಂದಿದ್ದರೂ ಜಿ.ಪಂಚಾಯತಿಯಿಂದ ಅನುಮೋದನೆ ಆಗದೇ ಸೇವೆ ಸಲಿಸುತ್ತಿರುವ ಸಿಬ್ಬಂದಿಗಳಿಗೆ ನೇಮಕಾತಿ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ಇನ್ನು ಕೆಲವರು ಅನುಮೋದನೆ ಸಿಗದೆ ನಿವೃತ್ತಿ ಹೊಂದಿದ ಸಿಬ್ಬಂದಿಗಳು ಇದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಒಟ್ಟು ೭೨ ಜನ ಗ್ರಾ.ಪಂ ಸಿಬ್ಬಂದಿಗಳಿಗೆ ಅನುಮೋದನೆ ಆದೇಶ ಪತ್ರ ನೀಡಲಾಯಿತು. ನೇಮಕಾತಿ ಅನುಮೋದನೆಯಲ್ಲಿ ವಾಟರಮನ್, ಸ್ವೀಪರ್ ಸ್ವಚ್ಛತಾಗಾರ, ಕ್ಲರ್ಕ ಕಂ ಡಿಇಒ, ಸಿಪಾಯಿ, ಬಿಲ್ ಕಲೆಕ್ಟರ, ವಸೂಲಿ ಸಹಾಯಕ ಹುದ್ದೆಗಳ ನೇಮಕಾತಿ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದ್ದು, ಬಾಗಲಕೋಟೆ ತಾಲೂಕಿನ ೧೬, ಬಾದಾಮಿ ೧೪, ಇಳಕಲ್ಲ ೧೮, ಹುನಗುಂದ ೧೨, ಬೀಳಗಿ ೨೩, ಗುಳೇದಗುಡ್ಡ ೪, ಮುಧೋಳ ೨೭, ಜಮಖಂಡಿ ೪೨ ಹಾಗೂ ರಬಕವಿ-ಬನಹಟ್ಟಿ ತಾಲೂಕಿನ ೧೬ ಸಿಬ್ಬಂದಿಗಳಿಗೆ ಅನುಮೋದನೆ ಆದೇಶ ಪತ್ರ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಽಕಾರಿ ಪುನಿತ್, ಸಹಾಯಕ ಯೋಜನಾಽಕಾರಿ ಭೀಮಪ್ಪ ತಳವಾರ, ಸಹಾಯಕ ನಿರ್ದೇಶಕ ಎಸ್.ಎಂ.ಕಾಂಬಳೆ, ಗ್ರಾ.ಪಂ ಸಿಬ್ಬಂದಿಗಳ ಸಂಘದ ಜಿಲ್ಲಾಧ್ಯಕ್ಷ ಕುಮಾರ ಮುದ್ನೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.