ಚಿಕ್ಕಮಗಳೂರಲ್ಲಿ ಆಯೋಜಿಸಿದ್ದ ಆದಿಜಾಂಬವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಭೆಯಲ್ಲಿ ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು. ವೆಂಕಟೇಶ್, ಶ್ರೀನಿವಾಸಮೂರ್ತಿ, ಶ್ರೀನಿವಾಸ್ ಇತರರಿದ್ದರು. 
ಜಿಲ್ಲೆ

ಸೌಲಭ್ಯಕ್ಕಾಗಿ ಸಂಘಟಿತ ಹೋರಾಟ ನಡೆಸಿ

ಜಿ. ಗಜೇಂದ್ರ

ಚಿಕ್ಕಮಗಳೂರು: ರಾಜ್ಯದಲ್ಲಿ ಮಾದಿಗ ಸಮುದಾಯದ ಅಭಿವೃದ್ಧಿಗಾಗಿ ಯಾವ ಸರ್ಕಾರವೂ ಒತ್ತು ನೀಡಲಿಲ್ಲ. ಹಾಗಾಗಿ ಸಮುದಾಯ ಅಭಿವೃದ್ಧಿ ಹೊಂದಬೇಕಾದರೆ ಸಂಘಟಿತ ಹೋರಾಟಕ್ಕೆ ಸಿದ್ಧರಾಗಬೇಕು ಎಂದು ಆದಿಜಾಂಬವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ವೆಂಕಟೇಶ್ ಹೇಳಿದರು.

ನಗರದಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಮಾದಿಗ ಸಮಾಜವನ್ನು ಆರ್ಥಿಕ, ಶೈಕ್ಷಣಿಕ, ರಾಜಕೀಯ ಹಾಗೂ ಸಾಮಾಜಿಕವಾಗಿ ಮೇಲೆತ್ತಲು ಯಾವ ರಾಜಕೀಯ ಪಕ್ಷಗಳಿಂದ ಸಾಧ್ಯವಾಗಿಲ್ಲ. ಕೇವಲ ವೋಟ್‌ಬ್ಯಾಂಕ್ ಆಗಿ ಬಳಸಿಕೊಂಡಿವೆ ಎಂದು ದೂರಿದರು.
2016-17ರಲ್ಲಿ ಅಸ್ತಿತ್ವಕ್ಕೆ ಬಂದ ಮಾದಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ 2020ರಲ್ಲಿ ಮಾದಿಗ ಸಮುದಾಯವನ್ನು ಜಾಗೃತಿಗೊಳಿಸುವ ಹಿನ್ನೆಲೆಯಲ್ಲಿ ಮಾದಿಗ ಸಮಾಜದ ಜಿಲ್ಲಾ ಸಮಾವೇಶ ನಡೆಸಿ ಇತಿಹಾಸ ನಿರ್ಮಿಸಿದೆ. ಗ್ರಾಮೀಣ ಭಾಗದಲ್ಲಿರುವ ಸಮುದಾಯದವರನ್ನು ಗುರುತಿಸಿ ಸಂಘಟಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಕೋರಿದರು.
ಸೇವೆಯಿಂದ ನಿವೃತ್ತರಾದ ಶಿಕ್ಷಣ ಇಲಾಖೆಯ ಮಾನಪ್ಪ, ಕೃಷ್ಣಯ್ಯ, ಕಾರ್ಪೋರೇಷನ್ ಬ್ಯಾಂಕ್‌ನ ಶಿವಣ್ಣ, ಪೊಲೀಸ್ ಇಲಾಖೆಯ ವೀರಭದ್ರಯ್ಯ, ಶಿಕ್ಷಕ ಕಟ್ಟಿಮನಿ ಅವರನ್ನು ಸನ್ಮಾನಿಸಲಾಯಿತು. ಆದಿಜಾಂಬ ನೌಕರರ ಸಂಘದ ಗೌರವಾಧ್ಯಕ್ಷ ಎಲ್.ಎಸ್.ರೇವಣ್ಣ , ಕಾರ್ಯದರ್ಶಿ ಗಂಗಾಧರ್, ನಿವೃತ್ತ ನೌಕರರಾದ ಶ್ರೀನಿವಾಸಮೂರ್ತಿ, ಮೆಸ್ಕಾಂ ಇಂಜಿಯರ್ ಕೃಷ್ಣಮೂರ್ತಿ, ಶಿಕ್ಷಕರಾದ ಶ್ರೀನಿವಾಸ್, ಸತ್ಯಪ್ರಕಾಶ್, ಮುಖಂಡ ಸೆೋಮಶೇಖರ್ ಹಾಜರಿದ್ದರು.