ಚಿತ್ರದುರ್ಗ: ಪಿಸಿಪಿಎನ್‌ಡಿಟಿ ಕಾಯ್ದೆ 1994 ಮತ್ತು ತಿದ್ದುಪಡಿ ಕಾಯ್ದೆ ಸಮರ್ಪಕ ಅನುಷ್ಠಾನ ನಿಟ್ಟಿನಲ್ಲಿ ಡಿಎಚ್‌ಒ ಡಾ.ಜಿ.ಪಿ.ರೇಣುಪ್ರಸಾದ್ ಅವರು ಮಂ ಗಳವಾರ ನಗರದ ವಿವಿಧ ಖಾಸಗಿ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಹಠಾತ್ ಭೇಟಿ ನೀಡಿ ಪರಿಶೀಲಿಸಿದರು. ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೆಂಟರ್‌ಗಳ ಮಾಲೀಕರಿಗೆ ತಾಕೀತು ಮಾಡಿದರು.
ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ದಾಖಲಾತಿಗಳನ್ನು ಸರಿಯಾಗಿ ನಿರ್ವಹಿಸಬೇಕು. ಭ್ರೂಣಲಿಂಗ ಪತ್ತೆ ಬಹಿರಂಗ ಪಡಿಸುವುದು ಕಾಯ್ದೆಯ ಉಲ್ಲಂ ಘ ನೆಯಾಗಿದೆ ಎಂಬ ಸೂಚನೆಯನ್ನು ಇಂಗ್ಲಿಷ್,ಸ್ಥಳೀಯ ಭಾಷೆಗಳಲ್ಲಿ ಸಂಸ್ಥೆಯಲ್ಲಿ ಪ್ರದರ್ಶಿಸಬೇಕು. ಸ್ಕ್ಯಾನಿಂಗ್ ಕೊಠಡಿ ಬಳಿ ಸೂಕ್ತ ಮಾಹಿತಿ ಮತ್ತು ಚಿಕಿತ್ಸಾ ದರ ಪಟ್ಟಿ ಪ್ರಕಟಿಸುವುದು ಸೇರಿದಂತೆ ಹಲವು ಸೂಚನೆಗಳನ್ನು ನೀಡಿದರು. ಜಿಲ್ಲಾ ತಪಾಸಣಾ ಮತ್ತು ಪರಿಶೀಲನಾ ಸಮಿತಿ ಅಧ್ಯಕ್ಷ ಡಾ.ಸತ್ಯನಾರಾಯಣ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಹನುಮಂತಗೌಡ ಪೂಜಾರ್, ಡಿಇಒ ಮೋಹನ್ ಮತ್ತಿತರರು ಇದ್ದರು.
--