ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪ್ರದರ್ಶನಗೊಳ್ಳಬೇಕಿದ್ದ ಮಹಾತ್ಮರ ಸ್ತಬ್ಧಚಿತ್ರಗಳನ್ನು ತಿರಸ್ಕರಿಸಿರುವ ಗಣರಾಜ್ಯೋತ್ಸವ ಆಯ್ಕೆ ಸಮಿತಿ ಮತ್ತು ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಮಾನವ ಬಂಧುತ್ವ ವೇದಿಕೆ ಕಾರ್ಯಕರ್ತರು ಸೋಮವಾರ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಿದರು. ತೋಳಿ ಭರಮಣ್ಣ, ಯುವರಾಜ ತಳವಾರ, ವಕೀಲ ಈರಣ್ಣ ಪೂಜೇರಿ ಇತರರಿದ್ದರು. 
ಜಿಲ್ಲೆ

ಸ್ತಬ್ದಚಿತ್ರ ತಿರಸ್ಕರಿಸಿದ್ದಕ್ಕೆ ಎಂಬಿವೇ ಆಕ್ರೋಶ

Belagavi

ಬೆಳಗಾವಿ: ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪ್ರದರ್ಶನ ಗೊಳ್ಳಬೇಕಿದ್ದ ಮಹಾತ್ಮರ ಸ್ತಬ್ಧಚಿತ್ರಗಳನ್ನು ತಿರಸ್ಕರಿಸಿರುವ ಗಣರಾಜ್ಯೋತ್ಸವ ಆಯ್ಕೆ ಸಮಿತಿ ಮತ್ತು ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಮಾನವ ಬಂಧುತ್ವ ವೇದಿಕೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿ, ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ಕೇರಳ ರಾಜ್ಯದಿಂದ ಬ್ರಹ್ಮಶ್ರೀ ನಾರಾಯಣಗುರು, ಪಶ್ಚಿಮ ಬಂಗಾಳದಿಂದ ನೇತಾಜಿ ಸುಭಾಷಚಂದ್ರ ಭೋಸ್, ತಮಿಳುನಾಡು ಸರ್ಕಾರದಿಂದ ಸ್ವಾತಂತ್ರ್ಯ ಹೋರಾಟ ಬಿಂಬಿಸುವ ಸ್ತಬ್ಧಚಿತ್ರಗಳನ್ನು ಕಳುಹಿಸಿಕೊಡಲಾಗಿತ್ತು. ಆದರೆ, ಗಣರಾಜ್ಯೋತ್ಸವ ಆಯ್ಕೆ ಸಮಿತಿ ಈ ಮೂರು ರಾಜ್ಯಗಳ ಸ್ತಬ್ಧಚಿತ್ರಗಳನ್ನು ತಿರಸ್ಕರಿಸಿ, ಮಹಾತ್ಮರಿಗೆ ಅಪಮಾನ ಮಾಡಿದೆ ಎಂದು ಆರೋಪಿಸಿದರು. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಒಕ್ಕೂಟ ವ್ಯವಸ್ಥೆ ಬಗ್ಗೆ ಗೌರವವಿಲ್ಲ. ಇದರಿಂದ ದೇಶದ ಜನರು ಆ ಸರ್ಕಾರದ ಮೇಲೆ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಅವರು ದೇಶದ ಜನರ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಕೇಂದ್ರ ಸರ್ಕಾರದ ನೀತಿ ವಿರುದ್ಧವಾಗಿ ನಿರಂತವಾಗಿ ಹೋರಾಟ ಮುಂದುವರಿಸುತ್ತೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಮಾನವ ಬಂಧುತ್ವ ವೇದಿಕೆ ವಿಭಾಗ ಸಂಚಾಲಕ ತೋಳಿ ಭರಮಣ್ಣ, ಯುವರಾಜ ತಳವಾರ, ವಕೀಲ ಈರಣ್ಣ ಪೂಜೇರಿ, ಆಕಾಶ ಬೇವಿನಕಟ್ಟಿ, ಧರ್ಮರಾಜ ಗೌಡರ, ರೋಹಿಣಿ ಬಾಬಸೇಟ್, ಆಯಿಷಾ ಸನದಿ, ರಾಜಶ್ರೀ ನಾಯಕ, ದಿಲ್ದಾರ್ ಬೋಜಗಾರ ಇದ್ದರು.