ಜಿಲ್ಲೆ

ಸ್ನಾನ ಮಾಡುವ ದೃಶ್ಯ ಚಿತ್ರೀಕರಣ ಆರೋಪಿ ಬಂಧನ

ಮಂಗಳೂರು: ನಗರದ ಹೊರ ವಲಯದ ದೇರಳಕಟ್ಟೆ ಆಸ್ಪತ್ರೆಯ ವಾರ್ಡ್ ನಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುತ್ತಿದ್ದಾಗ ಗುಪ್ತವಾಗಿ ಮೊಬೈಲ್‌ ನಲ್ಲಿ ಚಿತ್ರೀಕರಣ ಮಾಡಿದ ಉಳ್ಳಾಲದ ಅಬ್ದುಲ್ ಮುನೀರ್ (40) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು. ಕ್ಯಾಮರಾದಲ್ಲಿ ದಾಖಲಾಗಿದ್ದ ದೃಶ್ಯ ಗಮನಿಸಿ ಆರೋಪಿಯನ್ನು ಉಳ್ಳಾಲ ಪೊಲೀಸರು ಶನಿವಾರ ಬಂಧಿಸಿದ್ದಾರೆ.