ಜಿಲ್ಲೆ

ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಿ

ಬಳ್ಳಾರಿ : ಸ್ಪರ್ಧಾ ಮನೋಭಾವನೆಯ ಕೊರತೆಯನ್ನು ಹೋಗಲಾಡಿಸಲು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಚರ್ಚೆಗಳಲ್ಲಿ ಸತತವಾಗಿ ಭಾಗವಹಿಸಬೇಕು ಎಂದು ವಿಎಸ್‌ಕೆ ವಿವಿ ಕುಲಪತಿ ಪ್ರೊ. ಎಂ ಮುನಿರಾಜು ಹೇಳಿದರು.
ಇಲ್ಲಿನ ವಿಎಸ್‌ಕೆ ವಿವಿ ಸಭಾಂಗಣದಲ್ಲಿ ವಿವಿಯ ವಿದ್ಯಾರ್ಥಿ ಕಲ್ಯಾಣ ಘಟಕ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಸಹಯೋಗದೊಂದಿಗೆ ಬುಧವಾರ ಆಯೋಜಿಸಿದ್ದ ಸಹಕಾರ ಕ್ಷೇತ್ರದ ವಿಷಯ ಕುರಿತು ಚರ್ಚಾ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಯುಗದಲ್ಲಿ ಸತತ ಪ್ರಯತ್ನ ಅನಿವಾರ್ಯವಾಗಿದೆ. ಆಳವಾದ ವಿಷಯ ಜ್ಞಾನವನ್ನು ಹೊಂದಲು ಚರ್ಚಾಸ್ಪರ್ಧೆಗಳು ಸಹಕಾರಿಯಾಗಿವೆ. ಚರ್ಚಾಸ್ಪರ್ಧೆಗಳಲ್ಲಿ ಭಾಗವಹಿಸಿ ನಿಮ್ಮಲ್ಲಿರುವ ನಿಪುಣತೆಯನ್ನು ಪ್ರದರ್ಶಿಸಿಸುವ ಮೂಲಕ ಒಳ್ಳೆಯ ಚರ್ಚಾ ಮನೋಭಾವನೆ ಬೆಳೆಸಿಕೊಳ್ಳಿ ಎಂದು ಹೇಳಿದರು.
ವಿವಿ ಕುಲಸಚಿವ ಎಸ್. ಎನ್. ರುದ್ರೇಶ ಮಾತನಾಡಿ, ವಿದ್ಯಾರ್ಥಿಗಳಿಗೆ ಬದುಕು ಕಟ್ಟಿಕೊಳ್ಳಲು ಚರ್ಚಾಸ್ಪರ್ಧೆಗಳು ಬಹುಪಯೋಗಿಯಾಗಿವೆ. ಚರ್ಚಾಸ್ಪರ್ಧೆಗಳಿಂದ ಶಬ್ದಗಳ ಭಂಡಾರ, ಜೀವನ ಶೈಲಿ, ಸ್ಪರ್ಧಾತ್ಮಕ ಮನೋಭಾವ ಬೆಳೆಯುತ್ತದೆ. ಸಹಕಾರಿ
ತತ್ವಗಳ ಬೋಧನೆ ಮತ್ತು ತರಬೇತಿಗಾಗಿ ಸಹಕಾರಿ ಸಂಸ್ಥೆಗಳು ವಿದ್ಯಾ ಸಂಸ್ಥೆಗಳೊಂದಿಗೆ ಕೈಜೋಡಿಸುತ್ತಿದ್ದು, ಸಂಸ್ಥೆಯ ವಿವಿಧ ಧ್ಯೇಯೋದ್ದೇಶಗಳನ್ನು ಪರಿಣಾಮಕಾರಿಯಾಗಿ ಸಾಧಿಸಲು ಇದರಿಂದ ಸಹಾಯವಾಗುತ್ತದೆ ಎಂದರು.
ಚರ್ಚಾಸ್ಪರ್ಧೆಯ ತೀರ್ಪುಗಾರ ಡಾ. ಕುಮಾರ, ವಿದ್ಯಾರ್ಥಿ ಕಲ್ಯಾಣ ಘಟಕದ ನಿರ್ದೇಶಕರಾದ ಡಾ. ಶಶಿಕಾಂತ
ಮಜಗಿ ಮಾತನಾಡಿದರು. ಚರ್ಚಾಸ್ಪರ್ಧೆಯಲ್ಲಿ ವಿವಿಧ ವಿಭಾಗಗಳ 10 ವಿದ್ಯಾರ್ಥಿಗಳು ಭಾಗವಹಿಸಿದ್ದರು