ಜಿಲ್ಲೆ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

ಮೈಸೂರು: ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೆಎಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದ್ದು, ಆಸಕ್ತರು ನ.16ರೊಳಗಾಗಿ ಹೆಸರು ನೋಂದಾಯಿಸಿಕೊಳ್ಳಲು ದೂ.0821-2515944, 9964760090 ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಡಾ.ಎ. ಖಾದರ್ ಪಾಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ್ಞಾನಬುತ್ತಿ ಸಂಸ್ಥೆ ಯಲ್ಲೂ ತರಬೇತಿ
ಜ್ಞಾನಬುತ್ತಿ ಸಂಸ್ಥೆ ವತಿಯಿಂದ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮತ್ತು ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳ ಲಿಖಿತ ಪರೀಕ್ಷೆಗೆ ಉಚಿತ ತರಬೇತಿಯನ್ನು ನೀಡಲಾಗುತ್ತಿದ್ದು, ಪದವೀಧರರಿಗೆ ಆದ್ಯತೆ ನೀಡಲಾಗುವುದು. ಆಸಕ್ತರು ನ.12ರೊಳಗಾಗಿ ನಗರದ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನಲ್ಲಿರುವ ಜ್ಞಾನಬುತ್ತಿ ಸಂಸ್ಥೆಯಲ್ಲಿ ಸಂಯೋಜಕರಾದ ಕೆ.ವೈ. ನಾಗೇಂದ್ರ (8296788251), ಸಿ.ಕೆ. ಕಿರಣ್‌ಕೌಶಿಕ್ (9972830857) ಅವರಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.