ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ಪಿಡಿಒ, ಎಫ್‌ಡಿಎ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಆಯೋಜಿಸಿದ್ದು, ಸೆ.2ರಂದು ಬೆಳಗ್ಗೆ 11ಕ್ಕೆ ಮುಕ್ತಗಂಗೋತ್ರಿ ಕಾವೇರಿ ಸಭಾಂಗಣದಲ್ಲಿ ತರಬೇತಿ ಶಿಬಿರವನ್ನು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಉದ್ಘಾಟಿಸುವರು.
ಕಬಿನಿ ಜಲಾಶಯ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ, 2011ನೇ ಬ್ಯಾಚ್‌ನ ಕೆಎಎಸ್ ಅಧಿಕಾರಿ ಬಿ. ಸುಪ್ರಿಯ ಬಾಣಗಾರ್ ಅವರು ಪರೀಕ್ಷಾ ಸಿದ್ಧತೆ ಕುರಿತು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವರು. ಕುಲಪತಿ ಪ್ರೊ.ಶರಣಪ್ಪ ವಿ. ಹಲಸೆ, ಕುಲಸಚಿವ ಪ್ರೊ.ಕೆ.ಎಲ್.ಎನ್. ಮೂರ್ತಿ
ಉಪಸ್ಥಿತರಿರುವರು. ತರಬೇತಿಗೆ ರಾಜ್ಯದ ವಿವಿಧ ಭಾಗಗಳಿಂದ ಅಂದಾಜು 350 ಅಭ್ಯರ್ಥಿಗಳು ಪ್ರವೇಶಾತಿ ಪಡೆದಿದ್ದಾರೆ ಎಂದು ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.