ಅರಕಲಗೂಡು: ತಾಲೂಕಿನ ಬಸವಾಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಿರ್ವಾಣೆಗೌಡ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವನೆ ಬೆಳೆಸಿಕೊಂಡು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು. ಬಹುಮಾನ ಗಳಿಸುವುದಕ್ಕಿಂತ ಸ್ಪರ್ಧಾ ಮನೋಭಾವನೆ ಮುಖ್ಯ ಎಂದರು.
ಗ್ರಾಪಂ ಅಧ್ಯಕ್ಷೆ ಕೆ.ರಾಧಾ, ಉಪಾಧ್ಯಕ್ಷ ಕುಮಾರ್, ಮಾಜಿ ಅಧ್ಯಕ್ಷ ಮಹೇಂದ್ರ ಕುಮಾರ್, ಶಾಲಾಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ರಮೇಶ, ತಾಲೂಕು ಪ್ರಾಥಮಿಕ ಶಾಲಾ ಸಂಘದ ಮಂಜೇಗೌಡ, ಮುಖ್ಯ ಶಿಕ್ಷಕಿ ಸರಸ್ವತಿ, ಶಾರದಾ ವಿದ್ಯಾಸಂಸ್ಥೆ ಮುಖ್ಯಶಿಕ್ಷಕ ರಮೇಶ್, ಶಿಕ್ಷಕರಾದ ಗಿಡ್ಡೇಗೌಡ, ವಿಜಯಕುಮಾರಿ, ಕುಳ್ಳಯ್ಯ, ಸೈಯದ್ ಜಮೀರ್ ಇತರರಿದ್ದರು.
ಕ್ಲಸ್ಟರ್ ವ್ಯಾಪ್ತಿಯ 4 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು ಮತ್ತು 8 ಕಿರಿಯ ಪ್ರಾಥಮಿಕ ಶಾಲೆಗಳ ಮಕ್ಕಳು ಪ್ರತಿಭಾ ಕಾರಂಜಿಯ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರತಿಭೆ ಪ್ರದರ್ಶಿಸಿದರು.