ಕೊಳ್ಳೇಗಾಲ: ಪಟ್ಟಣದ ಮಹದೇಶ್ವರ ಕಾಲೇಜು ಮೈದಾನದಲ್ಲಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಎಸ್‌ವಿಕೆ ಬಾಲಕಿಯರ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.
ಕ್ರೀಡಾಕೂಟಕ್ಕೆ ಡಿವೈಎಸ್ಪಿ ನಾಗರಾಜು ಗುಂಡು ಎಸೆಯುವ ಮೂಲಕ ಚಾಲನೆ ನೀಡಿ ಮಾತನಾಡಿ, ಕ್ರೀಡೆ ಸ್ಪರ್ಧಾತ್ಮಕ ವ್ಯಕ್ತಿತ್ವವನ್ನು ಮಕ್ಕಳಲ್ಲಿ ಮೂಡಿಸುತ್ತದೆ. ಸವಾರ್ಂಗೀಣ ಅಭಿವೃದ್ಧಿಗೆ ಪೂರಕವಾಗಿದೆ. ಯಾವುದೇ ಕೆಲಸ ಮಾಡಬೇಕಾದರು ಕ್ರೀಡೆ ಸ್ಫೂರ್ತಿ ತುಂಬುತ್ತದೆ. ದೇಹದ ಆಲಸ್ಯವನ್ನು ದೂರವಿಡುತ್ತದೆ ಎಂದರು.
ಎಸ್‌ವಿಕೆ ಕಾಲೇಜು ಪ್ರಾಂಶುಪಾಲ ಎಚ್. ಶ್ರೀಧರ್, ಪಟ್ಟಣ ಪೊಲೀಸ್ ಠಾಣೆ ಪಿಎಸ್‌ಐ ಚೇತನ್, ಎಸ್‌ಡಿಎಂಸಿ ಉಪಾಧ್ಯಕ್ಷ ನಾಗರಾಜು, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸ್ಟೀವನ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಜೋಸೆಫ್ ಅಲೆಕ್ಸಾಂಡರ್ ಇತರರಿದ್ದರು.