ಜಿಲ್ಲೆ

ಸ್ಪರ್ಧೆ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ

ಮೈಸೂರು: ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಬಿತ್ತಿ ಪ್ರದರ್ಶನ ಸ್ಪರ್ಧೆ ಹಾಗೂ ರಸ ಪ್ರಶ್ನೆ ಸ್ಪರ್ಧೆ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಶ್ರೀನಟರಾಜ ನರ್ಸಿಂಗ್ ಶಾಲೆ ಹಾಗೂ ಟಿ.ಎಸ್.ಚಂದ್ರಶೇಖರಯ್ಯ ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ ಆಯುಷ ಇಲಾಖೆಯ ಸಹಯೋಗದೊಂದಿಗೆ ಜೂ.16ರಂದು ಬಿತ್ತಿ ಪ್ರದರ್ಶನ ಸ್ಪರ್ಧೆ ಹಾಗೂ ರಸ ಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಶ್ರೀನಟರಾಜ ಪ್ರತಿಷ್ಠಾನದ ಅಧ್ಯಕ್ಷರಾದ ಹೊಸಮಠದ ಶ್ರೀಚಿದಾನಂದ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿದರು. ಆಡಳಿತಾಧಿಕಾರಿ ಪ್ರೊ.ಶಿವರಾಜಪ್ಪ, ಸರ್ಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಾಯಕ ನಿರ್ದೇಶಕ ಡಾ.ಲಕ್ಷ್ಮೀನಾರಾಯಣ ಶೆಣೈ, ಮೈಸೂರು ಕಾಲೇಜಿನ ಪ್ರಾಂಶುಪಾಲ ಡಾ. ಎನ್.ರಾಜೇಶ್, ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಹಾಗೂ ಅಂತರಾಷ್ಟ್ರೀಯ ಯೋಗ ಶಿಕ್ಷಕ ರಂಗನಾಥ, ಎನ್.ಎಸ್.ಸತ್ಯನಾರಾಯಣ ಇತರರು ಇದ್ದರು.
ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ವಿಶ್ವಾಸ್, ಸುಚಿತ್ರಾ, ವಿನೋದ್, ಮಹಾಲಕ್ಷ್ಮಿ, ಬಿತ್ತಿಪ್ರದರ್ಶನ ಸ್ಪರ್ಧೆಯಲ್ಲಿ ವಿಜೇತರಾದ ಪ್ರಜ್ಙಾ, ನಿಶಾ, ಪ್ರೀತಾಪ್ರಶಾಂತ, ಸಿಂಚನ, ಸೌಂದರ್ಯ, ಸೌಜನ್ಯ ಅವರಿಗೆ ಬಹುಮಾನ ವಿತರಿಸಲಾಯಿತು.