filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 36; 
ಜಿಲ್ಲೆ

ಸ್ಪರ್ಧೆಯಲ್ಲಿ ಸೋಲು- ಗೆಲುವು ಸಹಜ

ಡಿ.ಪಿ.ನಾಗರಾಜ ಶ್ರೇಷ್ಠಿ

ಚಿತ್ರದುರ್ಗ: ಕ್ರೀಡಾಪಟುಗಳು ಸಾಮರ್ಥ್ಯವನ್ನು ಉತ್ತಮವಾಗಿ ಪ್ರದರ್ಶಿಸುವ ಮೂಲಕ ರಾಜ್ಯಮಟ್ಟದ ದಸರಾ ಕ್ರೀಡಾಕೂಟದಲ್ಲಿ ನಮ್ಮ ಜಿಲ್ಲೆಯನ್ನು ಪ್ರತಿನಿಧಿಸಬೇಕೆಂದು ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಸಲಹೆ ನೀಡಿದರು.
ಜಿಲ್ಲಾಡಳಿತ, ಜಿಪಂ, ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಜಿಲ್ಲೆಯ ವಿವಿಧ ಕ್ರೀಡಾ ಸಂಸ್ಥೆಗಳ ಸಹಯೋಗದಲ್ಲಿ ಗುರುವಾರ ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಕ್ರೀಡೆಯಲ್ಲಿ ಸೋಲು- ಗೆಲುವು ಸಹಜ. ಗೆದ್ದಾಗ ಗೆಲುವನ್ನು ಸ್ವೀಕರಿಸುವ ರೀತಿಯಲ್ಲೇ ಸೋಲನ್ನೂ ಸ್ವೀಕರಿಸಬೇಕು. ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ವಿವಿಧ ಕ್ರೀಡಾಕೂಟಗಳಲ್ಲಿ ನಮ್ಮ ಜಿಲ್ಲೆಯ ಕ್ರೀಡಾಪಟುಗಳು ಹೆಚ್ಚಿನ ಸಾಧನೆ ಮಾಡಬೇಕೆಂದು ಆಶಿಸಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸುವುದಾಗಿ ಹೇಳಿದ ಶಾಸಕರು, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದರು.
ವಾಲಿಬಾಲ್, ಫುಟ್ಬಾಲ್, ಖೋಖೋ, ಕಬಡ್ಡಿ, ಬಾಸ್ಕೆಟ್‌ಬಾಲ್, ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್‌ಬಾಲ್, ಟೇಬಲ್ ಟೆನ್ನಿಸ್, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್, ಯೋಗ ಮತ್ತಿತರ ಅಥ್ಲೆಟಿಕ್ಸ್ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತಾ ಎಂ.ನೆಲವಿಗಿ, ಮೆದೇಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ವಿಜಯ್‌ಕುಮಾರ್ ಮತ್ತಿತರರು ಇದ್ದರು.