ಜಿಲ್ಲೆ

ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನಕ್ಕೆ ಚಾಲನೆ

ಹಾಸನ: ಕುಷ್ಠರೋಗವನ್ನು ಶೀಘ್ರ ಪತ್ತೆ ಹಚ್ಚಿ ಸಂಪೂರ್ಣ ಚಿಕಿತ್ಸೆಯನ್ನು ಪಡೆಯುವ ಮೂಲಕ ಕುಷ್ಠ ರೋಗದಿಂದ ಸಂಪೂರ್ಣ ಗುಣಮುಖ ಹೊಂದಬಹುದು ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ವಿಭಾಗದ ವತಿಯಿಂದ ಜ.30 ರಿಂದ ಫೆ.13 ರವರಿಗೆ ಏರ್ಪಡಿಸಲಾಗಿರುವ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನದ ಪಾಕ್ಷಿಕ ಆಚರಣೆಗೆ ಪೊಸ್ಟರ್ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಕುಷ್ಠರೋಗ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ ಎಂದು ತಿಳಿಸಿದರು.
ಭಯಬೇಡ ಕುಷ್ಠರೋಗ ಸಂಪೂರ್ಣ ಗುಣಮುಖವಾಗುವ ಖಾಯಿಲೆ, ಜಿಲ್ಲೆಯಲ್ಲಿ 7 ರೋಗಿಗಳಿರಿದ್ದಾರೆ. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಔಷಧಿ,ಚಿಕಿತ್ಸೆ ಲಭ್ಯವಿದೆ. ವ್ಯಕೀಯ ದೇಹದ ಮೇಲೆ ಯಾವುದೇ ಭಾಗದಲ್ಲಿ ತಿಳಿ ಬಿಳಿ ತಾಮ್ರ ವರ್ಣದ ಸ್ಪರ್ಶ ಜ್ಞಾನವಿಲ್ಲದ ಮಚ್ಚೆಗಳು ಕಂಡುಬಂದಲ್ಲಿ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಪರೀಕ್ಷಿಸಿಕೊಳ್ಳಿ ಎಂದು ತಿಳಿಸಿದರು.
ಕುಷ್ಠರೋಗಕ್ಕೆ ಅಂಟಿಕೊಂಡಿರುವ ಕಳಂಕ ಹಾಗೂ ತಾರತಮ್ಯವನ್ನು ಹೋಗಲಾಡಿಸಿ, ರೋಗಿಗಳಿಗೆ ಸಮಾಜದ ಮುಖ್ಯ ವಾಹಿನಿಯಲ್ಲಿ ಗೌರವಯುತವಾಗಿ ಬದುಕಲು ಅವಕಾಶ ನೀಡಬೇಕು ಎಂದರು. ಬನ್ನಿ ಸಮಾಜದ ಎಲ್ಲರೂ ಮಹಾತ್ಮ ಗಾಂಧೀಜಿಯವರ ಈ ಕನಸನ್ನು ನನಗಿಸೋಣ ಹಾಗೂ ಕುಷ್ಠ ಮುಕ್ತ ಭಾರತವನ್ನು ನಿರ್ಮಿಸೋಣ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಿಲ್, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ನಾಗೇಶ್ ಆರಾಧ್ಯ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಮಂಜುಳಾ ಮತ್ತಿತರರು ಹಾಜರಿದ್ದರು.