ಜಿಲ್ಲೆ

ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಪಣ ತೊಡಿ

ಯಾದಗಿರಿ: ಗ್ರಾಪಂಗಳಲ್ಲಿ ವೈಜ್ಞಾನಿಕ ವಿಧಾನಗಳ ಮೂಲಕ ತ್ಯಾಜ್ಯ ಸಂಗ್ರಹಣೆ-ಸಂಸ್ಕರಣೆ ಮಾಡಿ, ಸ್ವಚ್ಛ ಹಾಗೂ ಸುಂದರ ಗ್ರಾಮ ಮಾಡಲು ಪಂಚಾಯಿತಿ ಮಂಡಳಿ ಪಣ ತೊಡುವಂತೆ ಜಿಪಂ ಸಿಇಒ ಗರೀಮಾ ಪನ್ವಾರ ಕರೆ ನೀಡಿದರು.

ತ್ಯಾಜ್ಯ ನಿರ್ವಹಣೆ ಮಾಡಲು ಒಡಂಬಡಿಕೆ ಮಾಡಿಕೊಂಡಿರುವ ಜಿಲ್ಲೆಯ ಆಯ್ದ ಗ್ರಾಪಂ ಮಟ್ಟದ ಒಕ್ಕೂಟದ ಸದಸ್ಯರಿಗೆ ಗುರುವಾರ ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಈ ಒಕ್ಕೂಟದಲ್ಲಿ ಆಯಾ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಪಿಡಿಒ ಇರುತ್ತಾರೆ. ಪ್ರತಿ ಪಂಚಾಯಿತಿಗಳಿಗೆ ಸ್ವಚ್ಛವಾಹಿನಿ ವಾಹನ ಹಾಗೂ ಸ್ವಚ್ಛತಾ ಸಿಬ್ಬಂದಿ ನಿಯೋಜಿಸಲಾಗಿದೆ ಎಂದರು.

ಗ್ರಾಮೀಣಾಭಿವೃಧ್ಧಿ ಪಂಚಾಯತ ರಾಜ್, ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ ಹಾಗೂ ಜಿಪಂಗಳ ಸಹಯೋಗದಲ್ಲಿ ಸ್ವಚ್ಛ ಭಾರತ ಮಿಷನ್ ಹಂತ-2ರ ವಿವಿಧ ಘಟಕಾಂಶಗಳಾದ ವೈಯಕ್ತಿಕ ಶೌಚಗೃಹ ಬಳಕೆ, ತ್ಯಾಜ್ಯ ವಿಲೇವಾರಿ, ನೀರು ನಿರ್ವಹಣೆ ಕಾಮಗಾರಿಗಳು ಈಗಾಗಲೇ ಪ್ರಗತಿಯಲ್ಲಿವೆ. ಇದರಿಂದ ಗ್ರಾಮದಲ್ಲಿ ಸ್ವಚ್ಛತೆ ವಾತಾವರಣ ನಿಮರ್ಿಸಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.

ಶಹಾಪುರ ತಾಲೂಕಿನ ಕೊಳ್ಳೂರು (ಎಂ) ಗ್ರಾಮದಲ್ಲಿ ಈ ಪ್ರಯೋಗ ಮಾಡಲಾಗಿದೆ. ಅದರಂತೆ ತಾಲೂಕಿಗೆ ಒಂದರಂತೆ ಎಂಆರ್ಎಫ್ ಘಟಕಗಳ ನಿಮರ್ಾಣಕ್ಕೆ ಬೇಕಾಗಿರುವ ಜಮೀನು ಗುರುತಿಸಲಾಗಿದೆ. ಎಲ್ಲ ಪಂಚಾಯಿತಿ ಅಧ್ಯಕ್ಷರು ಘಟಕ ನಿರ್ಮಾಣಕ್ಕೆ ರುವ ಅನುದಾನ ಒಗ್ಗೂಡಿಸಿ ಅನುಷ್ಠಾನಕ್ಕಾಗಿ ಸಹಕರಿಸಬೇಕು ಎಂದು ಸಲಹೆ ನೀಡಿದರು.

ಸಾಹಸ್ ಸಂಸ್ಥೆಯ ನಿರ್ದೇಶಕ ಮಹೇಶ ಮಾತನಾಡಿ, ರೈನ್ ಮ್ಯಾಟರ್ ಪೌಂಡೇಶನ್ನ ಧನ ಸಹಾಯದಿಂದ ಜಿಲ್ಲೆಯಲ್ಲಿ ತ್ಯಾಜ್ಯ ನಿರ್ವಹಣೆಗೆ ಅಧಿಕಾರಿ ಮತ್ತು ಸಿಬ್ಬಂದಿ ಸಾಮಥ್ರ್ಯ ಅಭಿವೃಧ್ಧಿ ಮತ್ತು ಸಾರ್ವಜನಿಕರಿಗೆ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.