ಬಾಗಲಕೋಟೆ: ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ಜಿಲ್ಲಾಧಿಕಾರಿಗಳ ವಸತಿ ಗೃಹದ ರಸ್ತೆಯನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಶಾಸಕ ಎಚ್.ವಾಯ್.ಮೇಟಿ ರವಿವಾರ ಚಾಲನೆ ನೀಡಿದರು.
ಪೌರಾಡಳಿತ ನಿರ್ದೇಶನಾಲಯ ಮತ್ತು ಜಿಲ್ಲಾಡಳಿತದ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಆವರಣದಲ್ಲಿ ಗಿಡ ನೆಡುವ ಮೂಲಕ ಸ್ಚಚ್ಛತಾ ಕಾರ್ಯಕ್ಕೆ ಚಾಲನೆ ನೀಡಲಾಯಿತು. ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಜಿಲ್ಲಾಧಿಕಾರಿಗಳ ವಸತಿ ಗೃಹದ ರಸ್ತೆಯನ್ನು ಸ್ವಚ್ಛಗೊಳಿಸಿದರು.
ಸ್ಚಚ್ಛತಾ ಕಾರ್ಯದಲ್ಲಿ ಶಾಸಕ ಎಚ್.ವಾಯ್.ಮೇಟಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಸೇರಿದಂತೆ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ, ಜಿ.ಪಂ ಸಿಇಓ ಶಶಿಧರ ಕುರೇರ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.