ವಿಜಯವಾಣಿ ಸುದ್ದಿಜಾಲ ಗದಗ
ಗದಗ ನಗರದ ತ್ರಿಕೂಟೇಶ್ವರ ದೇವಸ್ಥಾನ ಆವರಣದಲ್ಲಿ ಆದರ್ಶ ಶಿಕ್ಷಣ ಸಂಸ್ಥೆಯ ವಿ.ಆರ್. ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಜಿಲ್ಲಾ ನೆಹರು ಯುವ ಕೇಂದ್ರದ ವತಿಯಿಂದ ಸೋಮವಾರ ಸ್ವಚ್ಛತಾ ಕಾರ್ಯಕ್ರಮ ಜರುಗಿತು.
ಎನ್‍ಎಸ್‍ಎಸ್ ಸ್ವಯಂಸೇವಕ ಸೇವಕರನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮ ಅಧಿಕಾರಿ ಪ್ರೊ.ಬಾಹುಬಲಿ ಜೈನರ ಮಾತನಾಡಿ, ಸ್ವಚ್ಛತೆ ನಮ್ಮ ಮನೆಗೆ ಸೀಮಿತವಾಗಿರಬಾರದು ಎಂದರು.
ಭಾರತ ಸರ್ಕಾರವು ನಡೆಸುತ್ತಿರುವ ಸ್ವಚ್ಛ ಭಾರತ ಅಭಿಯಾನವನ್ನು ದೇಶದ ಪ್ರತಿಯೊಂದು ಹಳ್ಳಿ ಮತ್ತು ನಗರಗಳಲ್ಲಿ ಪ್ರಾರಂಭಿಸಲಾಗಿದೆ. ಶೌಚಾಲಯಗಳನ್ನು ನಿರ್ಮಿಸುವುದು ಮತ್ತು ದೇಶದ ಮೂಲಸೌಕರ್ಯಗಳನ್ನು ಬದಲಾಯಿಸುವುದು, ಪ್ರತಿ ಬೀದಿ, ಹಳ್ಳಿಯಿಂದ ದೇಶದ ಪ್ರತಿ ಬೀದಿಗೆ ಇಂಥ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ವಿದ್ಯಾರ್ಥಿಗಳಲ್ಲಿ ಸ್ವಚ್ಛತೆ ಬಗ್ಗೆ ಅರಿವನ್ನು ಮೂಡಿಸಬೇಕು ಎಂದರು.
ಸ್ವಚ್ಛ ಭಾರತ ಅಭಿಯಾನ ನಿಮಿತ್ತ ಗಾಂಧಿ ಜಯಂತಿ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಸ್ವತಃ ಕೈಯಲ್ಲಿಪೊರಕೆ ಹಿಡಿದು ಸ್ವಚ್ಛಗೊಳಿಸಿ ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಇದು ಎಲ್ಲರಿಗೂ ಪ್ರೇರಣೆಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನೆಹರು ಯುವ ಕೇಂದ್ರದ ಮುಖ್ಯಸ್ಥೆ ಎನ್ ರಜನಿ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂ ಸೇವಕ ಸೇವಕಿಯರು ಉಪಸ್ಥಿತರಿದ್ದರು.