ಜಿಲ್ಲೆ

ಸ್ವಚ್ಛತೆಯ ಬಗ್ಗೆ ಅರಿವು ಕಾರ್ಯಕ್ರಮಕ್ಕೆ ರವಿನಾಕಲಗೂಡು ಚಾಲನೆ

ಹಾಸನ: ಮಕ್ಕಳ ಮೂಲಕ ಸಾರ್ವಜನಿಕರಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುತ್ತಿರುವ ಕಾರ್ಯಕ್ರಮವನ್ನು ಎಲ್ಲಾ ಶಾಲಾ ಕಾಲೇಜುಗಳು ಇಂತಹ ಉತ್ತಮ ಕಾರ್ಯವನ್ನು ಮಾಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವಾಧ್ಯಕ್ಷ ರವಿನಾಕಲಗೂಡು ಹೇಳಿದರು.

ನಗರದ ಬಸ್ ನಿಲ್ದಾಣದಲ್ಲಿ ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೆ ಹಾಗೂ ಮಲ್ನಾಡ್ ಇಂಟರ್ನ್ಯಾಷನಲ್ ಶಾಲಾ ಹಾಗೂ ಎವಿಕೆ ಪಿಯು ಕಾಲೇಜು ವಿದ್ಯಾರ್ಥಿಗಳ ವತಿಯಿಂದ ನಗರದ ಬಸ್ ನಿಲ್ದಾಣದಲ್ಲಿ ಗುರುವಾರ ಸ್ವಚ್ಛ ಮಲ್ನಾಡ್ ಕ್ಲಬ್ ವತಿಯಿಂದ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪರಿಸರವನ್ನ ಸ್ವಚ್ಛವಾಗಿ ಇಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಿರುವುದು ನಿಜಕ್ಕೂ ಸಂತೋಷ ತಂದಿದೆ ಎಂದರು.

ನಂತರ ವಿದ್ಯಾರ್ಥಿಗಳು ಬಸ್ ನಿಲ್ದಾಣ ಹೇಮಾವತಿ ಪ್ರತಿಮೆ ಸೇರಿದಂತೆ ಸುತ್ತಮುತ್ತ ಸ್ವಚ್ಛತಾ ಕಾರ್ಯವನ್ನು ಮಾಡುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಎವಿಕೆ ಪಿಯು ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್, ನಗರ ಸಾರಿಗೆಯ ಡಿಪೋ ಮ್ಯಾನೇಜರ್ ಪ್ರಶಾಂತ್, ಎಎಸ್ ಕೇಶವಮೂರ್ತಿ, ಮಲ್ನಾಡ್ ಇಂಟರ್ನ್ಯಾಷನಲ್ ಶಾಲೆಯ ಪ್ರಾಂಶುಪಾಲೆ ಹೇಮಲತಾ ಇತರರು ಇದ್ದರು