ಆಲಮೇಲೆ ಪಪಂ ಮುಖ್ಯಾಧಿಕಾರಿ ಅಭಿಷೇಕ ಪಾಂಡೆ ಹಾಗೂ ಸಿಬ್ಬಂದಿ ಪಟ್ಟಣದಲ್ಲಿ ಕಸಗೂಡಿಸುವ ಮೂಲಕ ಸಾರ್ವಜನಿಕರಲ್ಲಿ ಸ್ವಚ್ಛತೆ ಜಾಗೃತಿ ಮೂಡಿಸಿದರು. ರಾಹುಲ್ ಯಂಟಮಾನ, ಭೀಮಶಾ ಬಮ್ಮನಹಳ್ಳಿ ಇತರರಿದ್ದರು. 
ಜಿಲ್ಲೆ

ಸ್ವಚ್ಛತೆಯಿಂದ ಉತ್ತಮ ಆರೋಗ್ಯ

ಆಲಮೇಲ: ಪ್ರಧಾನಿ ನರೇಂದ್ರ ಮೋದಿ ಅವರು ಕಸ ಗೂಡಿಸುವ ಮೂಲಕ ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡಿದ್ದು, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಭಿಷೇಕ ಪಾಂಡೆ ಹೇಳಿದರು.

ಪಪಂ ವತಿಯಿಂದ ಇಂಡಿಯನ್ ಸ್ವಚ್ಛತಾ ಲೀಗ್ ಲಿಂಕ್ ಬಳಸಿ ಶನಿವಾರ ಹಮ್ಮಿಕೊಂಡಿದ್ದ ಸ್ವಚ್ಛತೆಗೆ ಬೆಂಬಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯ ಹಾಗೂ ನಗರಾಭಿವೃದ್ಧಿ ಸಚಿವಾಲಯ ಇದನ್ನು ಕಾರ್ಯಗತಗೊಳಿಸುವ ಹೊಣೆ ಹೊತ್ತಿದೆ. ಸ್ವಚ್ಛ ಭಾರತ ಅಭಿಯಾನ ಒಂದು ಸಮೂಹ ಚಳವಳಿಯಾಗಿದೆ. ಗಾಂಧೀಜಿ ಸ್ವಚ್ಛತೆ ಬಗ್ಗೆ ಆದ್ಯತೆ ನೀಡಿದ್ದರು. ಸ್ವಚ್ಛತೆಯಿಂದ ಉತ್ತಮ ಆರೋಗ್ಯ ಹೊಂದಬಹುದು ಎಂದರು.

ಪಪಂ ಸದಸ್ಯ ರಾಹುಲ್ ಯಂಟಮಾನ, ಭೀಮಶಾ ಬಮ್ಮನಹಳ್ಳಿ, ಶ್ರೀಶೈಲ ಭೋವಿ, ಬಿ.ಜಿ.ನಾರಾಯಣಕರ್, ಲಾಲ್‌ಸಾಬ್ ದೇವರಮನಿ, ಈರೇಶ ಮೋರಟಗಿ, ಶಿವಾನಂದ ಶಾವರಿ, ಕೆ.ಎಂ.ಕುಂಬಾರ, ಸೋಮಶೇಖರ ಭೋವಿ ಇತರರಿದ್ದರು.