ಜಿಲ್ಲೆ

ಸ್ವಾತಂತ್ರೃದಿಂದ ನೆಮ್ಮದಿ ಜೀವನ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ತಾಲೂಕಿನ ಉತ್ತುವಳ್ಳಿ ಗ್ರಾಮದಲ್ಲಿರುವ ಆಶ್ರಯ ಸೇವಾ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಶುಕ್ರವಾರ 79ನೇ ಸ್ವಾತಂತ್ರೃ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಹಾಗೂ ತಂಬೂರಿ ಕಲಾವಿದರಾದ ದೊಡ್ಡಮೋಳೆ ದೊಡ್ಡ ಗವಿ ಬಸಪ್ಪ ಧ್ವಜಾರೋಹಣ ನೆರವೇರಿಸಿದರು. ಇದೇ ವೇಳೆ ಟ್ರಸ್ಟ್‌ನ ಅಧ್ಯಕ್ಷ ರಮೇಶ್ ಪ್ರಭು ಮಾತನಾಡಿ, ಮಹಾತ್ಮ ಗಾಂಧಿ ಸೇರಿದಂತೆ ಅನೇಕ ಹೋರಾಟಗಾರರು ಭಾರತಕ್ಕೆ ಸ್ವಾತಂತ್ರೃ ತಂದು ಕೊಡುವ ಮೂಲಕ ಜನರು ಶಾಂತಿ, ಸಹಬಾಳ್ವೆಯಿಂದ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಎಂದರು.

ಹಿರಿಯ ಪತ್ರಕರ್ತ ಎಚ್.ಎಸ್. ಚಂದ್ರಶೇಖರ್ ಮಾತನಾಡಿ, ಆಧುನಿಕತೆ ಮತ್ತು ತಂತ್ರಜ್ಞಾನ ಮುಂದುವರಿಯುತ್ತಿದ್ದರೂ ಸಮಾಜದಲ್ಲಿ ಪ್ರೀತಿ, ವಿಶ್ವಾಸ, ಸಂಬಂಧಗಳು ಕಡಿಮೆಯಾಗುತ್ತಿವೆ. ಇದರಿಂದ ಸಂತೋಷವಾಗಿರಲು ಸಾಧ್ಯವಿಲ್ಲ. ಹೀಗಾಗಿ ಪ್ರತಿಯೊಬ್ಬರು ನೆಮ್ಮದಿ ಜೀವನವನ್ನು ಸಾಗಿಸಲು ಮುಂದಾಗಬೇಕು ಎಂದು ತಿಳಿಸಿದರು.

ರಂಗಭೂಮಿ ಕಲಾವಿದರ ಸಂಘದ ಜಿಲ್ಲಾಧ್ಯಕ್ಷ ಘಟಂ ಕೃಷ್ಣ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೊಡ್ಡಗವಿ ಬಸಪ್ಪ, ಪೊಲೀಸ್ ಪೇದೆ ಮಾದೇಶ್, ಪತ್ರಕರ್ತರಾದ ಇರಸವಾಡಿ ಸಿದ್ದಪ್ಪಾಜಿ, ಎಚ್.ಎಸ್. ಚಂದ್ರಶೇಖರ್ ಪಿ.ಗಾಯತ್ರಿ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸ್ವಾಮಿ ವಿವೇಕಾನಂದ ಸದ್ಭಾವನ ರಾಜ್ಯ ಪ್ರಶಸ್ತಿ ಪುರಸ್ಕೃತ ಜ.ಸುರೇಶ್ ನಾಗ್ ಹರದನಹಳ್ಳಿ, ಕೆ.ಎಂ ಮಲ್ಲೇಶ್ ಪ್ರಭು, ಮಹದೇವು ಇದ್ದರು.