ಜಿಲ್ಲೆ

ಸ್ವಾಬಲಂಬನೆ ಸಾಧಿಸುವತ್ತ ಭಾರತ ಹೆಜ್ಜೆ

ಯಳಂದೂರು: ಭಾರತ ಇಂದು ಎಲ್ಲ ಕ್ಷೇತ್ರಗಳಲ್ಲೂ ಸ್ವಾವಲಂಬನೆ ಸಾಧಿಸುವತ್ತ ದಿಟ್ಟ ಹೆಜ್ಜೆ ಹಾಕಿದೆ. ಪ್ರಧಾನಿ ಮೋದಿ ಅವರ ದೂರದೃಷ್ಟಿಯಿಂದ ದೇಶ ವಿಶ್ವದ ದೊಡ್ಡ ಶಕ್ತಿಯಾಗಿ ಹೊರಹೊಮ್ಮುತ್ತಿದ್ದು, ಸ್ವಾತಂತ್ರೊೃೀತ್ಸವದ ಶತಮಾನಕ್ಕೆ ಇಡೀ ಭಾರತ ಜಗತ್ತಿನ ಶಕ್ತಿಯಾಗಿ ಬೆಳೆಯಲಿದೆ ಎಂದು ಶಾಸಕ ಎನ್.ಮಹೇಶ್ ಹೇಳಿದರು.


ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶ ಇಂದು ಕೃಷಿ, ಆರೋಗ್ಯ ಕ್ಷೇತ್ರಗಳಲ್ಲಿ ಸ್ವಾವಲಂಬಿಯಾಗಿದೆ. ವೈಜ್ಞಾನಿಕ, ತಾಂತ್ರಿಕ ಕ್ಷೇತ್ರದಲ್ಲಿ ವಿಶ್ವ ನಿಬ್ಬೆರಗಾಗುವಂತೆ ಭಾರತ ಬೆಳೆಯುತ್ತಿದೆ. 2047 ರ ಶತಮಾನೋತ್ಸವದ ಸಂಭ್ರಮದಲ್ಲಿ ಅಮೆರಿಕಾ ಹಾಗೂ ಚೀನಾ ದೇಶಗಳನ್ನು ಹಿಂದಿಕ್ಕಿ ವಿಶ್ವದ ಸೂಪರ್ ಪವರ್ ರಾಷ್ಟ್ರ ನಮ್ಮದಾಗಲಿದೆ. ಮುಂದಿನ ದಿನಗಳಲ್ಲಿ ಇ-ವಾಹನಗಳ ಬಳಕೆ ದೇಶದ ದೂರ ದೃಷ್ಟಿಯ ದ್ಯೋತಕವಾಗಿದೆ ಎಂದರು.


ಮುಖ್ಯ ಭಾಷಣಕಾರ ದೊಡ್ಡಿಂದುವಾಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಎಚ್. ಆನಂದರಾಜು ಮಾತನಾಡಿದರು. ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಪೊಲೀಸರು ಹಾಗೂ ವಿದ್ಯಾರ್ಥಿಗಳ ಪಥಸಂಚಲನ ಗಮನ ಸೆಳೆಯಿತು.


ಪಪಂ ಅಧ್ಯಕ್ಷೆ ಪ್ರಭಾವತಿ, ಉಪಾಧ್ಯಕ್ಷೆ ಲಕ್ಷ್ಮಿಮಲ್ಲು, ಸದಸ್ಯರಾದ ಸವಿತಾ, ಶಾಂತಮ್ಮ, ನಾಮ ನಿರ್ದೇಶಿತ ಸದಸ್ಯರಾದ ರಘು, ಮಹೇಶ್, ನಿಂಗರಾಜು, ತಹಸೀಲ್ದಾರ್ ಪಿ. ಶಿವರಾಜ್, ಬಿಇಒ ಕೆ. ಕಾಂತರಾಜು, ವಿವಿಧ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರು ಹಾಜರಿದ್ದರು.