ಜಿಲ್ಲೆ

ಸ್ವಾಭಿಮಾನಿ ಸಮಾವೇಶಕ್ಕೆ 100 ಬಸ್ ವ್ಯವಸ್ಥೆ

ಚಾಮರಾಜನಗರ: ಹಾಸನದಲ್ಲಿ ಡಿ.5 ರಂದು ನಡೆಯಲಿರುವ ಸ್ವಾಭಿಮಾನಿ ಸಮಾವೇಶಕ್ಕೆ ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ 100 ಬಸ್ ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ಸ್ವಾಭಿಮಾನಿ ಸಮಾವೇಶಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ನಾಯಕತ್ವದಲ್ಲಿ ಕ್ಷೇತ್ರದಿಂದ ಸುಮಾರು 5 ಸಾವಿರಕ್ಕೂ ಹೆಚ್ಚಿನ ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಲಿದ್ದಾರೆ. ಕ್ಷೇತ್ರದಲ್ಲಿಯೇ 100 ಬಸ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರತಿ ಗ್ರಾಮಗಳಿಂದಲೂ ಪಕ್ಷದ ಕಾರ್ಯಕರ್ತರು, ಮುಖಂಡರು ಸಮಾವೇಶದಲ್ಲಿ ಭಾಗವಹಿಸಿ ಯಶಸ್ವಿಕೊಡಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಬ್ಲಾಕ್ ಅಧ್ಯಕ್ಷ ಎ.ಎಸ್. ಗುರುಸ್ವಾಮಿ, ಮಹಮದ್ ಅಸ್ಗರ್, ಎಂ. ಶಿವಮೂರ್ತಿ, ಜಿ.ಪಂ.ಮಾಜಿ ಸದಸ್ಯ ರಮೇಶ್, ಬಸವನಪುರ ರಾಜಶೇಖರ್, ನಗರಸಭಾ ಸದಸ್ಯ ಚಿನ್ನಮ್ಮ, ಗಣೇಶ್‌ಪ್ರಸಾದ್, ಬಸಪ್ಪನಪಾಳ್ಯ ನಟರಾಜು ಹಾಗೂ ಇತರರು ಹಾಜರಿದ್ದರು.