ನಾಪೋಕ್ಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ದುಶ್ಚಟದ ಅರಿವು ಮೂಡಿಸುವ ಸ್ವಾಸ್ಥೃ ಸಂಕಲ್ಪ ಕಾರ್ಯಕ್ರಮ ಮಂಗಳವಾರ ಸ್ಥಳಿಯ ಕರ್ನಾಟಕ ಪಬ್ಲಿಕ್ ಶಾಲಾ ಸಭಾಂಗಣದಲ್ಲಿ ನಡೆಯಿತು.
ಸ್ಥಳೀಯ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಿ, ದುಶ್ಚಟಗಳಿಂದ ಸಮಾಜದಲ್ಲಿ ಆಗುವ ಸಾಧಕ-ಬಾಧಕ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಕೊಡಗು ಜಿಲ್ಲಾ ಜನ ಜಾಗೃತಿ ವೇದಿಕೆಯ ಉಪಾಧ್ಯಕ್ಷ ಧನಂಜಯ ಅಗೋಳ ಕಜೆ ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಭೋದಿಸಿದರು.
ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪುರುಷೋತ್ತಮ, ನಾಪೋಕ್ಲು ಗ್ರಾಪಂ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾವತಿ ಅರುಣ್, ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕೆ.ಎ.ಹ್ಯಾರಿಸ್, ಕಾಲೇಜು ಪ್ರಭಾರ ಪ್ರಾಂಶುಪಾಲರಾದ ವಿಜಿತಾ. ಮೇಲ್ವಿಚಾರಕ ಸುನಿಲ್, ಸೇವಾ ಪ್ರತಿನಿಧಿ ಉಮಾಲಕ್ಷ್ಮೀ, ಗೀತಾ , ಪವಿತಾ, ಪೊನ್ನಮ್ಮ, ಕಾಲೇಜು ಬೋಧಕರು, ವಿದ್ಯಾರ್ಥಿ ವೃಂದ ಹಾಜರಿದ್ದರು.