ಜಿಲ್ಲೆ

ಹಂಪನಕಟ್ಟೆ ಎಂಸಿಸಿ ಬ್ಯಾಂಕ್ ನಲ್ಲಿ ಬೆಂಕಿ ಅವಘಡ

ಮಂಗಳೂರು: ನಗರದ ಹಂಪನಕಟ್ಟೆಯಲ್ಲಿರುವ ಎಂಸಿಸಿ ಬ್ಯಾಂಕ್ ನಲ್ಲಿ ಶುಕ್ರವಾರ ಬೆಂಕಿ ಅವಘಡ ಉಂಟಾಗಿದ್ದು, ಅಗ್ನಿ ಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ಶಮನ ಮಾಡಿದ್ದಾರೆ.

ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿ ಕೊಂ ಡಿರುವ ಸಾಧ್ಯತೆ ಇದೆ. ದಟ್ಟ ಹೊಗೆ ಕಾಣಿಸಿಕೊಂಡಿದೆ.