ಜಿಲ್ಲೆ

ಹಕ್ಕುಗಳ ರಕ್ಷಣೆ ಎಲ್ಲರ ಜವಾಬ್ದಾರಿ

ವಿದ್ಯಾ ಶೆಟ್ಟನಗೌಡ್ರ

ಚಿಕ್ಕೋಡಿ: ಮಹಿಳೆಯರ ಹಕ್ಕುಗಳ ರಕ್ಷಣೆ ಎಲ್ಲರ ಜವಾಬ್ದಾರಿ ಎಂದು ಚಿಕ್ಕೋಡಿ ೭ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ತಾರಕೇಶ್ವರಗೌಡ ಪಾಟೀಲ ಹೇಳಿದರು.

ಇಲ್ಲಿನ ವಕೀಲರ ಸಂಘದಿಂದ ಸೋಮವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಜನಜಾಗೃತಿ ಮೂಡಿಸಬೇಕಿದೆ ಎಂದು ತಿಳಿಸಿದರು.

ನಾಯಕಿ ಗೌರಿ ಮಾಂಜರೇಕರ ಮಾತನಾಡಿ, ಮಹಿಳೆಯರಿಲ್ಲದ ಜೀವನ ವ್ಯರ್ಥ. ಕಾನೂನಿನಿಂದ ರಕ್ಷಣೆ ಸಿಕ್ಕಿದ್ದರೂ, ಪೂರ್ಣ ಪ್ರಮಾಣದಲ್ಲಿ ಸುರಕ್ಷತೆ ಇಲ್ಲವಾಗಿದೆ ಎಂದರು. ವಕೀಲರ ಸಂಘದ ಅಧ್ಯಕ್ಷ ಕಲ್ಮೇಶ ಕಿವಡ ಮಾತನಾಡಿದರು.

ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಹರೀಶ ಪಾಟೀಲ, ೧ನೇ ಹೆಚ್ಚುವರಿ ದಿವಾಣಿ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ತೃಪ್ತಿ ಧರಣೆ, ಕವಿತಾ ಪಾಟೀಲ, ಪ್ರೀತಿ ಪಾಟೀಲ, ಎ.ಎ.ಚೌಗಲಾ, ಎಸ್.ಎಲ್ ಯರನಾಳೆ ಇತರರಿದ್ದರು.